ಜುಲೈ 12 ರಿಂದ 14ರ ತನಕ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಹಾಗೂ ಕೃಷಿ ಮೇಳ

0
103

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ನೇತೃತ್ವದಲ್ಲಿ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಗೆಳೆಯರ ಬಳಗ ನಂದಿಬೆಟ್ಟು ಇವರ ಸಹಯೋಗದೊಂದಿಗೆ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಹಾಗೂ ಕೃಷಿ ಮೇಳ 2024 ಜುಲೈ 12 ಶುಕ್ರವಾರದಿಂದ ಜುಲೈ 14 ಆದಿತ್ಯವಾರದ ತನಕ ಕುಂದಾಪುರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಅಧ್ಯಕ್ಷರಾದ ಜನನಿ ದಿನಕರ ಶೆಟ್ಟಿ ತಿಳಿಸಿದರು.

ಅವರು ಕುಂದಾಪುರದ ಪ್ರೆಸ್ ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ದೃಷ್ಟಿಯಿಂದ ಹಾಗೂ ಸಣ್ಣ ಕೃಷಿ ಮತ್ತು ಗೃಹ ಕೈಗಾರಿಕೆ ಉತ್ಪನ್ನ ತಯಾರಿಸುವ ಮತ್ತು ಮಾರಾಟ ಮಾಡುವವರಿಗೆ ಅನುಕೂಲ ಕಲ್ಪಿಸುವುದರೊಂದಿಗೆ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು.

Click Here

ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಸ್ಥಾಪಕಧ್ಯಕ್ಷರಾದ ಕಿರಣ್ ಕುಂದಾಪುರ ಮಾತನಾಡಿ, ಹಲಸು ಮೇಳದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆ, ಆಂಧ್ರದ ಮೊದಲಾದ ಭಾಗಗಳಿಂದ ಹಲಸು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಬಯಲು ಸೀಮೆಯ ಪ್ರಸಿದ್ಧ ಸಿಹಿ ಕೆಂಪು ಹಲಸು, ಚಂದ್ರ ಹಲಸು ಸೇರಿದಂತೆ ಅಪರೂಪದ ಹಲಸು ತಳಿಗಳ ಹಣ್ಣು ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ಮಾವಿನಹಣ್ಣು, ರಂಬೂಟಾನ್, ಡ್ರ್ಯಾಗನ್ ಪ್ರುಟ್ಸ್ ಸೇರಿದಂತೆ ವಿವಿಧ ಜಾತಿಯ ಹಣ್ಣುಗಳ ಮಾರಾಟ ಮಳಿಗೆಗಳು ಕೂಡಾ ಇರಲಿದೆ ಎಂದರು.

ಅತ್ಯಾದುನಿಕ ಯಂತ್ರೋಪಕರಣ ಮತ್ತು ಕೃಷಿ ಸಲಕರಣೆ ಪ್ರದರ್ಶನ ಮತ್ತು ಮಾರಾಟ, ಹಣ್ಣುಗಳ ಕೊಯ್ಲು ಮತ್ತು ಸಂಸ್ಕರಣೆ, ಹಲಸಿನ ಹಣ್ಣಿನಿಂದ ತಯಾರಿಸುವ ಬಗೆ ಬಗೆ ತಿಂಡಿ ಮತ್ತು ಹಪ್ಪಳ ಸಂಡಿಗೆ, ಐಸ್ ಕ್ರೀಮ್, ಹಲಸಿನ ಹಣ್ಣಿನ ಖಾದ್ಯಗಳು, ಮಾವಿನ ಹಣ್ಣಿನ ತಿನಿಸುಗಳು, ಬೇರೆ ಬೇರೆ ಶೈಲಿಯ ಉಪ್ಪಿನಕಾಯಿಗಳು, ಪ್ರಸಿದ್ಧ ನರ್ಸರಿಗಳು, ಕೃಷಿಗೆ ಸಂಬಂಧಪಟ್ಟ ಮಳಿಗೆಗಳು ಇಲ್ಲಿ ಇರುತ್ತದೆ ಎಂದರು.
ಖಾದಿ ಮತ್ತು ಕೈಮಗ್ಗಾ ಬಟ್ಟೆಗಳು, ಆಯುರ್ವೇದ ಉತ್ಪನ್ನಗಳು, ಚನ್ನಪಟ್ಟಣ ಗೊಂಬೆ, ಇಳಕಲ್ ಸೀರೆ ಮೊದಲಾದ ಅಪರೂಪದ ಮಳಿಗೆಗಳು ಇರುತ್ತದೆ.

ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಕಾರ್ಯದರ್ಶಿ ಶ್ರೀಧರ ಮಾತನಾಡಿ, ಈ ಹಲಸು ಮತ್ತು ಕೃಷಿ ಮೇಳದಲ್ಲಿ ಭಾಗವಹಿಸಲು ಈಗಾಗಲೇ 80 ಮಳಿಗೆಗಳು ನೊಂದಣಿಯಾಗಿದ್ದು, ಇನ್ನೂ 50ಕ್ಕೂ ಹೆಚ್ಚು ಕೃಷಿ, ಗೃಹ ಉಪಯೋಗಕ್ಕೆ ಸಂಬಂಧಪಟ್ಟ ಮಳಿಗೆಗಳು ನೊಂದಣಿಯಾಗುವ ಸಾಧ್ಯತೆ ಇದೆ. ಎಂದರು.

ಸುದ್ಧಿಗೋಷ್ಟಿಯಲ್ಲಿ ಕೋಶಾಧಿಕಾರಿ ಜಗದೀಶ ವಾಸುದೇವ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here