ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ :ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ(NATA) ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ರಾಜ್ಯಕ್ಕೆ 16ನೇ ರ್ಯಾಂಕ್ ಪಡೆದು, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿರುತ್ತಾಳೆ.
ಹಾಗೆಯೇ ಕಾಲೇಜಿನ ಇನ್ನೋರ್ವ ವಿದ್ಯಾರ್ಥಿನಿ ವರ್ಣಾ ಆಚಾರ್ ರಾಜ್ಯ ಮಟ್ಟದ 197ನೇ ರ್ಯಾಂಕನ್ನು ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾಳೆ.
ಈ ಮೂಲಕ ರಾಜ್ಯದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಅರ್ಹರಾಗಿರುತ್ತಾರೆ. ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿರುವ ಈ ವಿದ್ಯಾರ್ಥಿನಿಯರು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯರಾಗಿದ್ದಾರೆ.
ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.