ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ ಸುವರ್ಣಾವಕಾಶ – ರಾಜ ಗುಡಿ
ಕುಂದಾಪುರ ಮಿರರ್ ಸುದ್ದಿ…
ಕೋಟ: ಮಾಧ್ಯಮ ಎನ್ನುವುದು ಒಂದು ಸಂವಹನ ಕ್ಷೇತ್ರ ಅದು ಸಾಕಷ್ಟು ಬದಲಾವಣೆಗೊಂಡಿದೆ ಎಂದು ಮಣಿಪಾಲದ ಮಾಹೆಯ ಹಿರಿಯ ಸಹಾಯಕ ಪ್ರಾಧ್ಯಾಪಕ ರಾಜ ಗುಡಿ ನುಡಿದರು.
ಬುಧವಾರ ಕೋಟದ ವಿವೇಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಾಧ್ಯಮ ಕ್ಷೇತ್ರ ಒಂದು ಜವಾಬ್ದಾರಿಯುತ ಹಾಗೂ ಸಮಾಜದ ಒರೆಕೊರೆಗಳನ್ನು ಹೊರಜಗತ್ತಿಗೆ ಪ್ರಚುರಪಡಿಸಿ ಅದರ ಸಮಗ್ರ ಅನುಷ್ಠಾನದ ಕೇಂದ್ರವಾಗಿದೆ ಪ್ರಸ್ತುತ ವಿದ್ಯಾಮಾನದಲ್ಲಿ ಮಾಧ್ಯಮ ಡಿಜಿಟಲಿಕರಣಗೊಂಡ ಹಿನ್ನಲ್ಲೆಯಲ್ಲಿ ಅವಕಾಶಗಳು ತೆರೆದಿಡುವಂತ್ತಾಗಿದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಕೊರ್ಸಗಳಿವೆ ಇದನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದರು.
ಈ ವೇಳೆ ಪ್ರೆಸ್ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತ ರಂಗಪಯ್ಯ ಹೊಳ್ಳ ಇವರಿಗೆ ಗೌರವ ಪುರಸ್ಕಾರ ನೀಡಲಾಯಿತು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಗೌರವ ಸಮ್ಮಾನ ನೆರವೆರಿಸಿದರು
ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಉಪಸ್ಥಿತರಿದ್ದರು. ಪತ್ರಕರ್ತ ವಸಂತ ಗಿಳಿಯಾರ್ ಪ್ರಾಸ್ತಾವನೆ ಸಲ್ಲಿಸಿದರು. ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪತ್ರಕರ್ತ ಚಂದ್ರಶೇಖರ್ ಬೀಜಾಡಿ ನಿರೂಪಿಸಿದರು. ಕಾರ್ಯದರ್ಶಿ ಹರೀಷ್ ಕಿರಣ್ ತುಂಗ ವಂದಿಸಿದರು.