ಕುಂದಾಪುರ :ಅ.31 ಮತ್ತು ಸೆ.1ರಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ – ಸರ್ವಾಧ್ಯಕ್ಷರಾಗಿ ಪ್ರೊ. ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ

0
171

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ಅಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಬಿದ್ಕಲ್‍ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಉಮೇಶ ಪುತ್ರನ್ ಹೇಳಿದರು.
ಅವರು ಕುಂದಾಪುರ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಆ.31ರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸೆ.1ರಂದು ಬೆಳಿಗ್ಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಸಮ್ಮೇಳನ ಉದ್ಘಾಟನೆ, ವಿವಿಧ ಗೋಷ್ಠಿಗಳು, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದು ನಮ್ಮ ಅವಧಿಯಲ್ಲಿ ನಡೆಯುತ್ತಿರುವ ಮೂರನೇ ಸಮ್ಮೇಳನವಾಗಿದ್ದು, ಬಿದ್ಕಲ್‍ಕಟ್ಟೆಯಲ್ಲಿ ತಾಲೂಕು ಸಮ್ಮೇಳನ ನಡೆಯುತ್ತಿರುವುದಕ್ಕೆ ಪರಿಸರದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿಯವರನ್ನು ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

Click Here

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2019ರಲ್ಲಿ ವಯೋ ನಿವೃತ್ತರಾದವರು. ಇವರು ಕನ್ನಡಕ್ಕೆ ತನ್ನದೆಯಾದ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈ ಸಮ್ಮೇಳನದಲ್ಲಿ ಕನ್ನಡ ಮಾಧ್ಯಮದಲ್ಲಿ ಶೇ.100 ಫಲಿತಾಂಶ ಪಡೆದ ಸರ್ಕಾರಿ ಶಾಲೆಗಳನ್ನು ಗೌರವಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ ಅವರು, ಕಳೆದ ವರ್ಷ ಕುಂದಾಪುರ ಘಟಕದ ನೇತೃತ್ವದಲ್ಲಿ ವೈದ್ಯ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಮಾಡಲಾಗಿದೆ. ಕಳೆದ ವರ್ಷದಿಂದ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಜಿಲ್ಲಾ ಸಮ್ಮೇಳನಕ್ಕೆ ಮಾತ್ರ ಬರುತ್ತಿದೆ. ಹಾಗಾಗಿ ತಾಲೂಕು ಸಮ್ಮೇಳನಗಳಿಗೆ ಸಂಪನ್ಮೂಲ ಕ್ರೋಡೀಕರಣ ಕಷ್ಟವಾಗುತ್ತಿದೆ. ಕಳದ ಬಾರಿ ಜಿಲ್ಲೆಯ 4 ತಾಲೂಕು ಸಮ್ಮೇಳನಗಳು ಆಗಿವೆ. ಎಂದರು.

ತಾಲೂಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಂ.ಮಹೇಶ ಹೆಗ್ಡೆ ಮಾತನಾಡಿ, ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಈಗಾಗಲೆ ಎರಡು ಪೂರ್ವಭಾವಿ ಸಭೆಗಳನ್ನು ನೆಡೆಸಿದ್ದೇವೆ. ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬಿದ್ಕಲ್ ಕಟ್ಟೆಯಲ್ಲಿ ಯಶಸ್ವಿ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ಆರ್ಥಿಕ ಸಮಿತಿ ಅಧ್ಯಕ್ಷರಾದ ಅರುಣ್ ಕುಮಾರ್ ಹೆಗ್ಡೆ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಘಟಕದ ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here