ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವ ಹಿನ್ನೆಲೆ, ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 19 ರಂದು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಹಾಗೂ ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ. 1077 ಹಾಗೂ 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.