ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಅತಿ ವೇಗವಾಗಿ ಬಂದ ಬೈಕೊಂಡು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಾಯಕನ ಕಟ್ಟೆ ಎಂಬಲ್ಲಿ ಡಿವೈಡರಿಗೆ ಬಡಿದ ಪರಿಣಾಮ ಬೈಕಿನಲ್ಲಿದ್ದ ಸವಾರ ಸೇರಿದಂತೆ ಇಬ್ಬರು ಗಂಭೀರವಾಗಿ ಸೋಮವಾರ ಸಂಜೆ ನಡೆದಿದೆ.
ರಾಜಸ್ಥಾನ ಮೂಲದ ಇಬ್ಬರು ಯುವಕರು ಬೈಂದೂರು ಕಡೆಯಿಂದ ಬೈಕಿನಲ್ಲಿ ಕುಂದಾಪುರ ಕಡೆಗೆ ಪ್ರಯಾಣಿಸುತ್ತಿದ್ದರು. ಸೋಮವಾರ ಸಂಜೆ ಸುಮಾರು 5.55ಕ್ಕೆ ನಾಯ್ಕನಕಟ್ಟೆ ಎಂಬಲ್ಲಿ ಫ್ಲೈ ಓವರ್ ಮೇಲೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ಡಿವೈಡರಿಗೆ ಬಡಿದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಮತ್ತು ಸ್ಥಳೀಯರು ಗಾಯಗೊಂಡವರನ್ನು ಆಂಬುಲೆನ್ಸ್ ನಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ವಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.