ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ದೇಶ ರಕ್ಷಣೆಯ ಹೊಣೆಯನ್ನು ಸೈನಿಕರಿಗೆ ಬಿಟ್ಟು ನಾವು ಸುಮ್ಮನೇ ಕೂರಬಾರದು. ಬದಲಾಗಿ ಗಡಿ ಕಾಯುವ ಯೋದರಿಗೆ ಪ್ರೇರಣೆ, ಪ್ರೋತ್ಸಾಹ, ಅವರ ರಕ್ಷಣೆಗೆ ದೇಶದ ಪ್ರತಿಯೊಬ್ಬನೂ ಪಣತೊಡಬೇಕು ಎಂದು ಉಡುಪಿ ಜಿಲ್ಲಾ ಒಬಿಸಿ ಅಧ್ಯಕ್ಷರಾದ ವಿಜಯ್ ಕೊಡವೂರ್ ಹೇಳಿದರು.
ಅವರು ಬೈಂದೂರಿನಲ್ಲಿ ಸೋಮವಾರ ಸಂಜೆ ಬೈಂದೂರು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಆಯೋಜಿಸಿದ ಕಾರ್ಗಿಲ್ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಸಂಭ್ರಮಾಚಾರಣೆ, ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಇದೇ ಸಂದರ್ಭ ನಿವೃತ್ತ ಸೈನಿಕರಿಗೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ವೀರ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.
ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸದಾನಂದ್ ಉಪ್ಪಿನಕುದ್ರು, ಜಿಲ್ಲಾ ಮಹಿಳಾಮೋರ್ಚಾ ಪ್ರಧಾನಕಾರ್ಯದರ್ಶಿ ಅನಿತಾ ಮರವಂತೆ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಉಪಾಧ್ಯಕ್ಷ ರಾಘು ನೆಂಪು, ಮಂಡಲ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಪೂಜಾರಿ, ಕಾರ್ಯದರ್ಶಿಗಳಾದ ಕರಣ್ ಪೂಜಾರಿ, ಕೃಷ್ಣ ಖಾರ್ವಿ, ಅಶೋಕ್ ಕಂಚಿಕಾನ್, ಒಬಿಸಿ ಮೋರ್ಚಾ ಅಧ್ಯಕ್ಷ ಶಿವರಾಜ್ ಪೂಜಾರಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲಾ ಕುಂದರ್, ಬೈಂದೂರು ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ನೆಲ್ಯಾಡಿ, ಪ್ರವೀಣ್ ಸೋಮಯ್ಯ, ಜಯಾನಂದ ಹೋಬಳಿದಾರ್ ಸೇರಿದಂತೆ ಬಿಜೆಪಿಯ ವಿವಿಧ ಸಂಘಟನೆಗಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರುಗಳು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರಸಾದ್ ಪಿ ಬೈಂದೂರು ಸ್ವಾಗತಿಸಿ, ನಿರೂಪಿಸಿದರೆ, ಅನುರಾಮೆಂಡನ್ ವಂದಿಸಿದರು. ಸಭಾ ಕಾರ್ಯಕ್ರಮಕ್ಕೆ ಮುನ್ನ ಬಿಜೆಪಿ ಯುವಮೋರ್ಚಾ ಬೈಂದೂರು ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ ನೆಡೆಯಿತು.