ಕುಂದಾಪುರ ಮಿರರ್ ಸುದ್ದಿ…
ಕೋಟ: ಗಿರಿ ಫ್ರೆಂಡ್ಸ್ ಚಿತ್ರ ಪಾಡಿ – ಸಾಲಿಗ್ರಾಮ ಸಂಸ್ಥೆ ಆಶ್ರಯದಲ್ಲಿ ವನ ಮಹೋತ್ಸವವನ್ನು ರಾಷ್ಟ್ರೀಯ ಹೆದ್ದಾರಿ ೬೬ರ ಇಕ್ಕೆಲಾದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.
ಉದ್ಯಮಿ ಅರುಣ್ ಕುಂದರ್ ವನಮಹೋತ್ಸವಕ್ಕೆ ಚಾಲನೆ ನೀಡಿ ಗಿರಿ ಫ್ರೆಂಡ್ಸ್ ಸಂಸ್ಥೆಯು ಸಮಾಜ ಮುಖಿ ಕಾರ್ಯ ನಿತ್ಯ ನಿರಂತರವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.
ವನ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನೆಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವಿಶ್ವನಾಥ್ ನಾವಡ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಚಿತ್ರಪಾಡಿ ಶಾಲೆಯ ದೈಹಿಕ ಶಿಕ್ಷಕ ಸತಿಶ್ಚಂದ್ರ ಶೆಟ್ಟಿ, ಸಂಸ್ಥೆಯ ಸಂಚಾಲಕ ರವಿ ಪೂಜಾರಿ ಉಪಸ್ಥಿತರಿದ್ದರು.
ಸಂಸ್ಥೆ ಪ್ರಮುಖರಾದ ಸತೀಶ್ ಆಚಾರ್ ಪ್ರಾಸ್ತವಿಕ ಮಾತುಗಳನ್ನಾಡಿದರು. ರಾಮಚಂದ್ರ ಆಚಾರ್ ಪ್ರಾರ್ಥಿಸಿದರು. ಗೌರವಾಧ್ಯಕ್ಷ ಮಂಜುನಾಥ್ ಆಚಾರ್ ಸ್ವಾಗತಿಸಿದರು, ಕಾರ್ಯದರ್ಶಿ ಹರೀಶ್ ಆಚಾರ್ ವಂದಿಸಿದರು. ರಾಜೇಶ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.