ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಹಯೋಗದೊಂದಿಗೆ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪ್ರೌಢ ಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿ ಸನತ್ ಆರ್ ಸಿರಿಯಾನ್ ವಿಜಯಶಾಲಿಯಾಗುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ಈತನ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.