ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಕುಂದಾಪುರ ತಾಲೂಕು ಮತ್ತು ಸೈಂಟ್ ಮೇರಿಸ್ ಪ್ರೌಢ ಶಾಲೆ ಕುಂದಾಪುರ ಇವರ ಸಹಯೋಗದಲ್ಲಿ ಆಯೋಜಿಸಿದ ಕುಂದಾಪುರ ತಾಲೂಕು ಮಟ್ಟದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಚದುರಂಗ ಸ್ಪರ್ಧೆಯು ಇತ್ತೀಚಿಗೆ ಜರುಗಿತು.
ಪ್ರೌಢಶಾಲಾ ವಿಭಾಗದ 17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಲಿಟ್ಲ್ ಸ್ಟಾರ್ ( ವಿದ್ಯಾರಣ್ಯ )ಆಂಗ್ಲ ಮಾಧ್ಯಮ ಶಾಲೆ ಯಡಾಡಿ – ಮತ್ಯಾಡಿ ಕುಂದಾಪುರ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿನಿ ಪ್ರಕೃತಿ.ಪಿ. ಶೆಟ್ಟಿ ಮತ್ತು ಪ್ರೌಢಶಾಲಾ ವಿಭಾಗದ 17ರ ವಯೋಮಾನದ ಹುಡುಗರ ವಿಭಾಗದಲ್ಲಿ ಮನ್ವಿತ್.ಬಿ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ವಿಜೇತರಿಗೆ ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಪ್ರದೀಪ್.ಕೆ ಮತ್ತು ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಸೂರ್ಯ, ಜಯಲತ ಮತ್ತುಸತೀಶ್ ಕುಮಾರ್ ಮಾರ್ಗದರ್ಶನ ನೀಡಿದರು.