ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಬೆಂಗಳೂರು, ಇಂಡಿಯಾ ಪೌಂಡೇಷನ್ ಫಾರ್ ಆರ್ಟ್ಸ್ ಬೆಂಗಳೂರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇವರ ಸಹಯೋಗದಲ್ಲಿ ಆ.3ರಂದು “ಕಲಿ ಕಲಿಸು ಕಲಾ ಅಂತರ್ಗತ ಕಲಿಕೆಯ“ ಕರಾವಳಿಯ ವೀರ ವನಿತೆಯರು ಸಾಮಾಜಿಕ ಶೋಷಣೆ ಮತ್ತು ವಿದೇಶಿಯರ ವಿರುದ್ಧ ಹೋರಾಡಿ ನಾಡು ಕಟ್ಟಿದ ಕಥನಕ್ಕೆ ಯಕ್ಷರಂಗ ರೂಪ ನೀಡಿ ಶಾಲಾ ವಿದ್ಯಾರ್ಥಿನಿಯರಿಂದ ಅಭಿನಯಿಸುವುದು ಎಂಬ ಯೋಜನೆಯ ಅಂಗವಾಗಿ ಮಕ್ಕಳಿಗೆ ಯಕ್ಷಗಾನ ತರಬೇತಿಯನ್ನು ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶೋಭಾರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಯಕ್ಷಗಾನ ತರಬೇತುದಾರರಾದ ಕಿಶೋರ ಕುಮಾರ ಆರೂರು ಸಂಚಾಲಕರು ಯಕ್ಷಸಿರಿ ಶಂಕರನಾರಾಯಣ, ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ. ಉಪಸ್ಥಿತರಿದ್ದರು.
ಕಲಿ ಕಲಿಸು ಕಲಾ ಅಂತರ್ಗತ ಕಲಿಕೆಯ ಯೋಜನೆಯ ನಿರ್ವಾಹಕರಾದ ಶಾಲಾ ಸಹ ಶಿಕ್ಷಕ ಆನಂದ ಕುಲಾಲ ಪ್ರಸ್ತಾವನೆಗೈದರು. ಸಹ ಶಿಕ್ಷಕಿ ಸಂಧ್ಯಾ ಕೆ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಪ್ರಮೀಳಾ ವಂದಿಸಿದರು. ಗೌರವ ಶಿಕ್ಷಕಿ ವಿಶಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ನಂತರದಲ್ಲಿ ಯಕ್ಷಗಾನ ತರಬೇತುದಾರರಾದ ಕಿಶೋರ ಕುಮಾರ ಮಕ್ಕಳಿಗೆ ವಿವಿಧ ತಾಳಗಳನ್ನು ಪರಿಚಯಿಸುತ್ತ ಯಕ್ಷಗಾನ ತರಬೇತಿಯನ್ನು ಆರಂಭಿಸಿದರು.