ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ “ವಿಶ್ವ ಕುಂದಾಪುರ ಕನ್ನಡ ದಿನ ಗಜ್ಮೈಕ್ 2024” – ಕುಂದಾಪುದ ಸಂಸ್ಕೃತಿಯೇ ನಮ್ಮ ಆಸ್ತಿ.

0
139

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಜನತಾ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪುರ ಕನ್ನಡ ದಿನ ಗಜ್ಮೈಕ್ 2024 ಸಂಭ್ರಮದಿಂದ ನೆರವೇರಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮುದಾಯ ಬಾನುಲಿ ಕೇಂದ್ರ ಕುಂದಾಪುರದ ಕಾರ್ಯಕ್ರಮ ನಿರ್ವಾಹಕರಾದ ಜ್ಯೋತಿಯವರು ಹೃದಯದ ಭಾಷೆ ಅಂದರೆ ಅದು ಕುಂದಾಪ್ರ ಕನ್ನಡ‌, ಈ ನೆಲದ ಸಂಸ್ಕ್ರತಿ ಸಂಪ್ರದಾಯವನ್ನು ಉಳಿಸಿ ಬೆಳೆಸೋಣ, ಕುಂದಾಪುರದ ಸಂಸ್ಕ್ರತಿಯೇ ನಮ್ಮ ಆಸ್ತಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪ್ರ ಕನ್ನಡದ ಹಾಸ್ಯ ಕಲಾವಿದರಾದ ಚೇತನ್ ಕುಮಾರ್ ನೈಲಾಡಿಯವರು ಕುಂದಾಪ್ರ ಭಾಷೆಯಲ್ಲಿ ಕುಂದಾಪುರ ಕನ್ನಡದ ವಿವಿಧ ಸಂಪ್ರದಾಯಗಳನ್ನು ಹಾಸ್ಯ ಶೈಲಿಯಲ್ಲಿ ಹೇಳುವುದರೊಂದಿಗೆ, ನೆಲದ ಸಂಸ್ಕ್ರತಿ ಸಂಪ್ರದಾಯದ ಮಹತ್ವವನ್ನು ತಿಳಿಸಿದರು.

Click Here

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಮಾತನಾಡಿ ಭಾಷಾಭಿಮಾನ ನಮ್ಮೆಲ್ಲರ ಆದ್ಯ ಕರ್ತವ್ಯ, ಭಾಷೆಯ ಬಲವರ್ಧನೆಗಾಗಿ ಕಾಲೇಜಿನಲ್ಲಿ ಹತ್ತಾರು ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗಾಗಿ ಶ್ರಮಿಸುತ್ತಿದ್ದೇವೆ ಎಂದರು.

ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಜನತಾ ಕಾಲೇಜಿನ ಉಪ – ಪ್ರಾಂಶುಪಾಲರಾದ ರಮೇಶ ಪೂಜಾರಿ, ಕಾಲೇಜಿನ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜನತಾ ಶಾಲೆ ಹಾಗೂ ಕಾಲೇಜಿನ ‘ಶ್ಲಾಘನಾ ಶನಯ’ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳಿಂದ ‘ಗೌಜ್ ಗಮ್ಮತ್’ ಕುಂದ ಕನ್ನಡದ ಸಾಂಸ್ಕೃತಿಕ ವೈಭವ ನಡೆಯಿತು.

ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿಯವರು ಸ್ವಾಗತಿಸಿ, ಉಪನ್ಯಾಸಕರಾದ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಗುರುರಾಜ್ ವಂದಿಸಿದರು.

LEAVE A REPLY

Please enter your comment!
Please enter your name here