ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಶಾಲಾ ಶಿಕ್ಷಣ ಇಲಾಖೆ ಕುಂದಾಪುರ, 2024-25 ನೇ ಸಾಲಿನ ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಅಂಪಾರು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಪ್ರೀತೇಶ್ ಏಳನೇ ತರಗತಿ ವಿದ್ಯಾರ್ಥಿ ಇವರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದನಾ ಸಹಿತ ಶುಭಾಶಯಗಳನ್ನು ಕೋರಿದ್ದಾರೆ.