ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಬಾಂಡ್ಯಾ ಎಜ್ಯುಕೇಶನ್ ಟ್ರಸ್ಟ್ ನ ಗುರುಕುಲ ವಿದ್ಯಾಸಂಸ್ಥೆ ಯಲ್ಲಿ ಭಾನುವಾರ ಆಗಸ್ಟ್ 11ರಂದು ಸಾಂಪ್ರದಾಯಿಕ ಸಸ್ಯ ಪದಾರ್ಥಗಳ ಪರಿಚಯ ಸಸ್ಯಾಮೃತ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯ ಯಾಜ್ಞ್ಯವಲ್ಕ್ಯ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ 11.30ಕ್ಕೆ ನಡೆಯುವ ಸಸ್ಯಾಮೃತ ಕಾರ್ಯಕ್ರಮದಲ್ಲಿ ಬೀಚ್ ಹೀಲಿಂಗ್ ಹೋಮ್ ಹೂಡೆ, ಉಡುಪಿಯ ನಿರ್ದೇಶಕ ಡಾ. ಮೊಹಮ್ಮದ್ ರಫೀಕ್, ಕುಂದಾಪುರದ ಆಲೂರು ಚಿತ್ರಕೂಟ ಆಯುರ್ವೇದ ಆಸ್ಪತ್ರೆಯ ಡಾ. ನೀಲಾ ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜೀ ಶಾಸಕ, ಬಾಂಡ್ಯಾ ಎಜ್ಯುಕೇಶನಲ್ ಟ್ರಸ್ಟ್ ನ ಸಂಸ್ಥಾಪಕ ಬಿ. ಅಪ್ಪಣ್ಣ ಹೆಗ್ಡೆ ವಹಿಸಿಲಿದ್ದಾರೆ ಎಂದು ಸಂಸ್ಥೆಯ ಜಂಟಿ ಆಡಳಿತ ನಿರ್ದೇಶಕಿ ಅನುಪಮ ಎಸ್. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.