ಕುಂದಾಪುರ ಮಿರರ್ ಸುದ್ದಿ…
ಗಂಗೊಳ್ಳಿ : ಗಂಗೊಳ್ಳಿಯ ಯುವ ಉದ್ಯಮಿ ಸುಭಾಶ್ಚಂದ್ರ ಪೂಜಾರಿ (52) ಹೃದಯಾಘಾತದಿಂದ ಬುಧವಾರ ನಿಧನರಾದರು.
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಬಿಲ್ಲವ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಉತ್ತಮ ಕರಾಟೆ ಪಟುವಾಗಿದ್ದ ಇವರು ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿದ್ದರು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.