ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕುಂದಾಪುರ ಪುರಸಭೆಯ ಮಾಜಿ ಉಪಾಧ್ಯಕ್ಷ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ, ಕುಂದಾಪುರ ಸಂಗಮ್ ನಿವಾಸಿ ಜೇಕಬ್ ಡಿಸೋಜ (64ವ) ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾದರು.
ಮೂರು ಬಾರಿ ಅವರು ಕುಂದಾಪುರ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಸಹಕಾರ ವ್ಯವಸ್ಥೆಯಲ್ಲಿಯೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅವರು ರೋಜರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಭಾನುವಾರ ರೋಜರಿ ಮಾತಾ ಇಗರ್ಜಿಯಲ್ಲಿ ನಡೆಯಲಿದ್ದು, ಭಾನುವಾರ (ಆ.18) ಬೆಳಿಗ್ಗೆ 11 ಗಂಟೆಗೆ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 3.30ಕ್ಕೆ ಮನೆಯಿಂದ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ರೋಜರಿ ಇಗರ್ಜಿ ಆವರಣಕ್ಕೆ ಕೊಂಡೊಯ್ಯಲಾಗುವುದು.