ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿಜಾಣ ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವರ್ಗಾವಣೆಗೊಂಡ ಶಿಕ್ಷಕರಾದ ಸತೀಶ್ ಶೆಟ್ಟಿ ಇವರನ್ನು ಸನ್ಮಾನಿಸಿ ಬಿಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಚಿತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರವೀಂದ್ರ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ದೇವಾಡಿಗ, ಎಸ್‍ಡಿಎಂಸಿ ಅಧ್ಯಕ್ಷರಾದ ಮುಕಾಂಬು, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ್ ಶೆಟ್ಟಿ, ಶಿಕ್ಷಕರಾದ ರಾಘವೇಂದ್ರ ನಾಯಕ್ ಎಸ್.ಡಿ.ಎಮ್.ಸಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.