ಕುಂದಾಪುರ :ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘ: ಆ.24ಕ್ಕೆ ನೂತನ ಕಟ್ಟಡ ಉದ್ಘಾಟನೆ

0
165

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘ ನಿ., ಕರ್ಕುಂಜೆ ಸುಸಜ್ಜಿತವಾದ ಸ್ವಂತ ಕಟ್ಟಡ ನಿರ್ಮಾಣ ಮಾಡಿದ್ದು, ‘ಬಾಂಡ್ಯ ಶ್ರೀ ಕೆ. ಸುಧಾಕರ ಶೆಟ್ಟಿ ಸಹಕಾರಿ ಸದನ’ ಉದ್ಘಾಟನಾ ಕಾರ್ಯಕ್ರಮ ಆ.24 ಶನಿವಾರ ಬೆಳಿಗ್ಗೆ 9.45ಕ್ಕೆ ನಡೆಯಲಿದೆ.

ನೂತನ ಕಟ್ಟಡವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಡಾ.ಎಂಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಕೆ.ಬಾಂಡ್ಯ ಸುಧಾಕರ ಶೆಟ್ಟಿ ಹೇಳಿದರು.

ಅವರು ಕುಂದಾಪುರ ಪ್ರೆಸ್‍ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸಭಾಭವನವನ್ನು ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಉದ್ಘಾಟನೆ ಮಾಡಲಿದ್ದಾರೆ. ಬ್ಯಾಂಕಿಂಗ್ ವಿಭಾಗವನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಲಿದ್ದಾರೆ. ಗೋದಾಮು ಕಟ್ಟಡವನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ದುರ್ಗಾಪರಮೇಶ್ವರಿ ಭೋಜನ ಭೂಮಿಯನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಉದ್ಘಾಟಿಸಲಿದ್ದಾರೆ. ಸಭಾ ಭವನವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ ಎಂದರು.

Click Here

Click Here

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್.ರಾಜು ಪೂಜಾರಿ, ಎಂ.ಮಹೇಶ ಹೆಗ್ಡೆ, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಕುಂದಾಪುರ ಇದರ ಅಧ್ಯಕ್ಷರಾದ ಹೆಚ್.ಹರಿಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕರಾದ ಲಾವಣ್ಯ ಕೆ.ಆರ್, ಕುಂದಾಪುರ ಉಪ-ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ದ.ಕ ಜಿಲ್ಲಾ ಹಾಲು ಒಕೂಟದ ಮಾಜಿ ನಿರ್ದೇಶಕರಾದ ಕೆ.ಬಾಂಡ್ಯ ಸುಬ್ಬಣ್ಣ ಶೆಟ್ಟಿ, ಕರ್ಕುಂಜೆ ಗ್ರಾ.ಪಂ. ಅಧ್ಯಕ್ಷರಾದ ಬಿಜ್ರಿ ರಾಜೀವ ಶೆಟ್ಟಿ, ಆಜ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಗುಲ್ವಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಎಚ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.

ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2 ಗಂಟೆಗೆ ಬಡಗುತಿಟ್ಟಿನ ಹೆಸರಾಂತ ಯಕ್ಷಗಾನ ಕಲಾವಿದರ ಒಗ್ಗೂಡುವಿಕೆಯಲ್ಲಿ ಅದ್ದೂರಿಯ ಯಕ್ಷಗಾನ ಪ್ರದರ್ಶನ ದಿ.ಕಾಳಿಂಗ ನಾವಡ ವಿರಚಿತ ‘ನಾಗಶ್ರೀ’ ಪ್ರದರ್ಶನಗೊಳ್ಳಲಿದೆ ಎಂದರು.

ನೂತನ ಕಟ್ಟಡವು ಸುಮಾರು 2 ಕೋಟಿ ವೆಚ್ಚದಲ್ಲಿ ಈ ಕಟ್ಟಡ ಆಧುನಿಕ ಶೈಲಿಯಲ್ಲಿ ನಿರ್ಮಿಸಲಾಗಿದೆ. ಬ್ಯಾಂಕಿಂಗ್ ವ್ಯವಸ್ಥೆ, ಮೀಟಿಂಗ್ ಹಾಲ್, ಸಭಾಭವನ, ಮೇಲ್ಗಡೆ ದುರ್ಗಾಪರಮೇಶ್ವರಿ ಭೋಜನ ಭೂಮಿ ನಿರ್ಮಾಣ ಮಾಡಲಾಗಿದೆ. ಹವಾನಿಯಂತ್ರಿತ ವ್ಯವಸ್ಥೆ ಕಲ್ಪಿಸಲಾಗಿದೆ. 300 ಜನ ಕುಳಿತುಕೊಳ್ಳಬಹುದಾದ ಸಭಾಭವನ ಇದಾಗಿದೆ. ಸಾರ್ವಜನಿಕರಿಗೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ನಮ್ಮ ಸದಸ್ಯರ ಕಾರ್ಯಕ್ರಮಗಳಿಗೆ ರಿಯಾಯತಿ ನೀಡಲಾಗುವುದು. ಹಾಗೂ ಲಿಪ್ಟ್ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದರು.

25ರ ಸಂಭ್ರಮ:
ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘ ನಿ., ಕರ್ಕುಂಜೆ 1999ನೇ ಇಸವಿಯಲ್ಲಿ ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘದಿಂದ ವಿಭಜನೆಗೊಂಡು ಕರ್ಕುಂಜೆ ಸಹಕಾರಿ ವ್ಯವಸಾಯಿಕ ಬ್ಯಾಂಕ್ ಆಗಿ ಸ್ಥಾಪನೆಯಾಯಿತು. ನಂತರ ಸರಕಾರದ ಆದೇಶದ ಮೇರೆಗೆ 2011ರಿಂದ ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘ ನಿ., ಕರ್ಕುಂಜೆಯಾಗಿ ಪರಿವರ್ತನೆಗೊಂಡಿತು. ಕರ್ಕುಂಜೆ, ಗುಲ್ವಾಡಿ, ಮತ್ತು ಕೊಡ್ಲಾಡಿ ಗ್ರಾಮಗಳ ಕಾರ್ಯವ್ಯಾಪ್ತಿ ಹೊಂದಿದೆ. ವಿಭಜನೆಗೊಂಡಾಗ ಸದಸ್ಯರ ಪಾಲು ಹಣವು 2.86 ಲಕ್ಷವಿದ್ದು, ಠೇವಣಿ ಹಣವು 89 ಸಾವಿರ ಇತ್ತು. ದ,ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಕೃಷಿ ಸಾಲವಾಗಿ 25 ಲಕ್ಷದ 72 ಸಾವಿರ ಪಡೆದಿದ್ದು, ಕ್ಷೇಮ ನಿಧಿಯಲ್ಲಿ 2335 ರೂ ಇದ್ದು, ಕೇಂದ್ರ ಬ್ಯಾಂಕಿನ ಪಾಲು ಒಂದು ಸಾವಿರ ಇತ್ತು. ಗುಲ್ವಾಡಿಯಲ್ಲಿ 34 ಸಾವಿರ ಬೆಲೆ ಬಾಳುವ ಗೋದಾಮು ಕಟ್ಟಡ ಹೊಂದಿತ್ತು. ವಿಭಜನೆಯ ಸಂದರ್ಭದಲ್ಲಿ 57,915 ರೂ ನಷ್ಟ ವರ್ಗಾವಣೆಗೊಂಡಿತ್ತು ಎಂದರು.

Click Here

LEAVE A REPLY

Please enter your comment!
Please enter your name here