ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಆ.29ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಹಯೋಗದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ವಿ. ಹೆಚ್ ಭಾಗವಹಿಸಿ 4ನೇ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ ಅಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಇವರನ್ನು ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದರು.