ಕುಂದಾಪುರ ಮಿರರ್ ಸುದ್ದಿ…
ಕೋಟ:ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಲೇ ಬೇಕು ಆ ಮೂಲಕ ಸರಕಾರ ರೈತರ ನಿರ್ಲಕ್ಷ್ಯ ತೋರಣೆಯಿಂದ ಹಿಂದೆ ಸರಿಯಬೇಕು ಎಂದು ಕೋಟ ಮಣೂರು ಹಿರಿಯ ಕೃಷಿಕ ಎಂ ಶಿವ ಪೂಜಾರಿ ಆಗ್ರಹಿಸಿದ್ದಾರೆ.
ಕೋಟದ ಪಂಚವರ್ಣ ಯುವಕ ಮಂಡಲ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ ಗಿಳಿಯಾರು ,ಮಣೂರು ಫ್ರಂಡ್ಸ್ ಮಣೂರು,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರುಗಳ ಜಂಟಿ ಸಹಯೋಗದಲ್ಲಿ ತಿಂಗಳ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮನಡಿಗೆ 11ನೇ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿ ರೈತ ಪ್ರಸ್ತುತ ಬೆಳೆದ ಬೆಳೆಗೆ ಸಮರ್ಪಕ ದರ ಸಿಗದೆ ಹೈರಾಣವಾಗಿದ್ದಾನೆ. ಇನ್ನೊಂದೆಡೆ ಪ್ರವಾಹ ಪರಿಸ್ಥಿತಿಯಿಂದ ಕಂಗೆಟ್ಟು ತಲೆಮೇಲೆ ಕೈಇತ್ತು ಕೂರುವ ಸ್ಥಿತಿ ಸೃಷ್ಠಿಯಾಗಿದೆ. ಹೀಗಾದರೆ ರೈತ ಸಮುದಾಯದ ಹಿತಕಾಯುವವರು ಯಾರು ಎಂದು ಪ್ರಶ್ನಿಸಿದರು. ಈ ನಿಟ್ಟಿನಲ್ಲಿ ರೈತ ಸಮುದಾಯ ಒಗ್ಗಟ್ಡು ಪ್ರದರ್ಶಿಸಬೇಕು,ಕೃಷಿ ಕ್ಷೇತ್ರದಲ್ಲಿ ಯುವ ಸಮುದಾಯ ಮುಂದೆ ಬರಬೇಕು ಈ ನಿಟ್ಟಿನಲ್ಲಿ ಈ ಭಾಗದ ಸಂಘಸಂಸ್ಥೆಗಳು ರೈತಕಾಯಕಕ್ಕೆ ಪ್ರೋತ್ಸಾಹ ನಿರಂತರವಾಗಿ ನೀಡುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಗೌರವಿಸಿದ ಸಂಘಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿವ ಪೂಜಾರಿಯವರಿಗೆ ಕೃಷಿ ಪರಿಕರ ಹಸಿರು ಶಾಲು ತೋಡಿಸಿ ಪತ್ನಿ ಶಾರದ ಜೊತೆಗೂಡಿ ಗೌರವಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭಾಸ್ಕರ್ ಶೆಟ್ಟಿ ಮಣೂರು,ರೈತಧ್ವನಿ ಸಂಘ ಅಧ್ಯಕ್ಷ ಜಯರಾಮ ಶೆಟ್ಟಿ, ಯುವ ಕೃಷಿಕ ಭೋಜ ಪೂಜಾರಿ ಗಿಳಿಯಾರು,ಕೋಟ ಕರ್ಣಾಟಕ ಬ್ಯಾಂಕ್ ಸಿಬ್ಬಂದಿ ನಾಗೇಶ್ ಮಯ್ಯ ,ವಿಪ್ರ ಮಹಿಳಾ ಬಳಗ ಸಾಲಿಗ್ರಾಮದ ಸುಜಾತ ಬಾಯರಿ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ,ಪಂಚವರ್ಣದ ಸ್ಥಾಪಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮನೆಂಗಳದಿ ಗಿಡ ನಡುವ ಮೂಲಕ ವಿಶಿಷ್ಠ ರೀತಿಯಲ್ಲಿ ಪರಿಸರಸ್ನೇಹಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಪಂಚವರ್ಣ ಸಂಚಾಲಕ ಅಜಿತ್ ಕುಮಾರ್ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ನಿರೂಪಿಸಿದರು.ಕಾರ್ಯದರ್ಶಿ ನಿತೀನ್ ಕುಮಾರ್ ಕೋಟ ವಂದಿಸಿದರು.