ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಉಡುಪಿ ಜಿಲ್ಲೆಯ ಗಡಿಯಲ್ಲಿರುವ ಬೈಂದೂರು ಕ್ಷೇತ್ರ ಕೆ.ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ಪಕ್ಷದ ಎಲ್ಲ ಮುಖಂಡರ ಸಹಕಾರದಿಂದ ಭದ್ರ ನೆಲೆ ಕಂಡುಕೊಂಡಿದೆ. ಪಕ್ಷ ಇನ್ನೂ ಕೂಡಾ ಪ್ರಬಲವಾಗಿ ಬೆಳೆಯಲು ಕ್ಷೇತ್ರದ ಹೃದಯ ಭಾಗದಲ್ಲಿ ಇಂದು ಆರಂಭಗೊಂಡಿರುವ ಕಛೇರಿ ಭದ್ರ ಬುನಾದಿಯಾಗಲಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಅವರು ಬೈಂದೂರು ಸರ್ಕಲ್ ಬಳಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್‍ನ ಸದಸ್ಯರ ನೊಂದಾವಣೆ ಈಗಾಗಲೇ ಆರಂಭವಾಗಿದೆ. ಪ್ರತೀ ಕ್ಷೇತ್ರದಲ್ಲಿ ಹೊಸತಾಗಿ 7 ಸಾವಿರ ಸದಸ್ಯರನ್ನು ನೇಮಿಸುವ ಮೂಲಕ ಜಿಲ್ಲೆಯಲ್ಲಿ 70 ಸಾವಿರ ಸದಸ್ಯರ ಸೇರಿಸುವ ಗುರಿ ಹೊಂದಲಾಗಿದೆ ಎಂದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಬೈಂದೂರು ಕ್ಷೇತ್ರದ ಹೃದಯ ಭಾಗದಲ್ಲಿ ಕಛೇರಿ ಆರಂಭಗೊಂಡಿದೆ. ಹಳ್ಳಿ ಹಳ್ಳಿಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ, ಹೊಸ ಸದಸ್ಯರನ್ನು ಸೇರಿಸುವ ಕೆಲಸ ನಡೆಯುತ್ತಿದೆ. ಜನರು ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸವಿಟ್ಟಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ರಾಜು ಪೂಜಾರಿ, ವಾಸುದೇವ ಯಡಿಯಾಳ, ರಘುರಾಮ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯರಾದ ಗೌರಿ ದೇವಾಡಿಗ, ಬೈಂದೂರು ಬ್ಲಾಕ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ತಾಪಂ ಮಾಜಿ ಸದಸ್ಯರಾದ ವಿಜಯ ಶೆಟ್ಟಿ, ಕೆ.ರಮೇಶ ಗಾಣಿಗ ಕೊಲ್ಲೂರು, ಜಗದೀಶ ದೇವಾಡಿಗ, ಉದಯ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಪ್ರಸನ್ನ ಕುಮಾರ್ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗಾಣಿಗ, ಉದಯ ಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಶರತ ಕುಮಾರ್ ಶೆಟ್ಟಿ, ಅರವಿಂದ ಪೂಜಾರಿ, ರೋಶನ್ ಕುಮಾರ್ ಶೆಟ್ಟಿ, ಶಾಂತಿ ಪಿರೇರಾ ಮೊದಲಾದವರು ಉಪಸ್ಥಿತರಿದ್ದರು.