ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಟೇಶ್ವರ ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರು ರನ್ನರ್ಸ್ ಅಪ್ ಪ್ರಶಸ್ತಿ ಪಡೆಯುವುದರ ಮೂಲಕ ಐವರು ವಿದ್ಯಾರ್ಥಿನಿಯರು ಹಾಸನ ಜಿಲ್ಲೆಯಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ ಹೊಳ್ಳ ಮತ್ತು ಉದಯ ಮಡಿವಾಳ ಎಂ ತಂಡ ವ್ಯವಸ್ಥಾಪಕಿ ದಿವ್ಯ ಪ್ರಭ ಹಾಗೆ ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ.