ಕುಂದಾಪುರ ಮಿರರ್ ಸುದ್ದಿ…
ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಡಿ.10ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನ.23ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಾಮನಾಥ ರೈ , ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅಭಯಚಂದ್ರ ಜೈನ್, ಮಾಜಿ ಶಾಸಕ ಗೋಪಾಲ ಪೂಜಾರಿ, ರಾಜು ಪೂಜಾರಿ,
ಪ್ರದೀಪ್ ಕುಮಾರ್ ಶೆಟ್ಟಿ, ಎಸ್ ಪ್ರಕಾಶಚಂದ್ರ ಶೆಟ್ಟಿ,ಪ್ರಸನ್ನ ಕುಮಾರ್ ಶೆಟ್ಟಿ, ಶೇಖರ ಪೂಜಾರಿ ಹಾಗೂ ಇತರ ಮುಖಂಡರು ಈ ಸಂದರ್ಭದಲ್ಲಿದ್ದರು.