ಕುಂದಾಪುರ :ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಹೊಸೂರು ನೂತನ ಶಾಖೆ, ಕಟ್ಟಡ ಉದ್ಘಾಟನೆ

0
176

ಕುಂದಾಪುರ ಮಿರರ್ ಸುದ್ದಿ…

 

ಕುಂದಾಪುರ :ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಹೊಸೂರು ನೂತನ ಶಾಖೆ, ಕಟ್ಟಡದ ಉದ್ಘಾಟನೆ ಸೆ.16ರಂದು ನಡೆಯಿತು. ಹೊಸೂರು ಕಾನ್‍ಬೇರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮ ನಡೆಯಿತು.

ಉದ್ಘಾಟನಾ ಮಾತುಗಳನ್ನಾಡಿದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸರಿಯಾದ ಸಾಲ ಮರುಪಾವತಿಯಿಂದ ಇವತ್ತು ಗ್ರಾಮಾಂತರ ಪ್ರದೇಶಗಳಲ್ಲಿಯೂ ಸಹಕಾರ ಸಂಘಗಳ ಶಾಖೆ ಆರಂಭಕ್ಕೆ ಕಾರಣವಾಗಿದೆ. ಹೊಸೂರಿನಂತಹ ಪ್ರದೇಶದಲ್ಲಿ 55 ಲಕ್ಷ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣವಾಗಿದೆ. ಇದಕ್ಕೆ 7 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಅವರು ಘೋಷಿಸಿದರು.
ಸಹಕಾರ ಕ್ಷೇತ್ರ ಇವತ್ತು ಬಲಷ್ಠವಾಗಿ ಬೆಳೆಯುತ್ತಿದೆ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಹಕಾರ ಕ್ಷೇತ್ರ ಬೆಳೆದಿದೆ. ಕೃಷಿಸಾಲ ಮರುಪಾವತಿಯಲ್ಲಿ ನಮ್ಮ ಜಿಲ್ಲೆ 28 ವರ್ಷಗಳಲ್ಲಿ ಮೊದಲ ಸ್ಥಾನದಲ್ಲಿದೆ. ರಾಷ್ಟ್ರೀಕೃತ ಬ್ಯಾಂಕುಗಳು ಹುಟ್ಟಿದ ಈ ನಾಡಿನಲ್ಲಿ ಸಹಕಾರ ಸಂಘಗಳು ವಿಶ್ವಾಸಾರ್ಹತೆಯಿಂದ ಬಲಿಷ್ಠವಾಗಿ ಬೆಳೆದಿದೆ ಎಂದರು.

Click Here

Click Here

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಅಧ್ಯಕ್ಷತೆ ವಹಿಸಿದ್ದರು. ಪಡಿತರ ವಿಭಾಗವನ್ನು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸಿದರು. ಸೇಪ್ ಲಾಕರ್‍ನ್ನು ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್.ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ, ಇಡೂರು-ಕುಂಜ್ಞಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾ ಆಚಾರ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅರುಣಕುಮಾರ್ ಶೆಟ್ಟಿ, ಸ್ಥಳದಾನಿಗಳಾದ ಭೋಜರಾಜ ಶೆಟ್ಟಿ, ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಇದರ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕದಳಿ ಹೊಸೂರು ಇಲ್ಲಿನ ಆಡಳಿತ ಮೊಕ್ತೇಸರ ರಮಾನಂದ ಮಧ್ಯಸ್ಥ, ಹೊಸೂರು ಕಾನ್‍ಬೇರು ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವಲ್ಕುಂದ ಶಿವರಾಮ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಡಾ.ಅತುಲ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಡಾ.ಎಂಎನ್ ರಾಜೇಂದ್ರ ಕುಮಾರ್, ಸ್ಥಳದಾನಿಗಳಾದ ಮೂಕಾಂಬು ಭೋಜರಾಜ ಶೆಟ್ಟಿ, ಹಾಗೂ ಹೊಸೂರು ಗ್ರಾಮಸ್ಥರ ವತಿಯಿಂದ ಸಂಘದ ಅದ್ಯಕ್ಷರಾದ ಎನ್,ಮಂಜಯ್ಯ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷರಾದ ಜಗನ್ನಾಥ ಶೆಟ್ಟಿ ಹೊಸೂರು, ಮಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಜಿ ಪೂಜಾರಿ, ನಿರ್ದೇಶಕರಾಗಿ ಕೆ.ಭುಜಂಗ ಶೆಟ್ಟಿ ಕೆರಾಡಿ, ಐ.ಗೋವರ್ಧನ ಶೆಟ್ಟಿ ಇಡೂರು, ಬಿ.ರಾಮ ಹೊಸೂರು, ಸಂಜೀವ ಪೂಜಾರಿ ವಂಡ್ಸೆ, ಎ.ಜಯರಾಮ ಶೆಟ್ಟಿ ವಂಡ್ಸೆ, ಶೀನಪ್ಪ ಶೆಟ್ಟಿ ಹೊಸೂರು, ಕ್ರಷ್ಣಯ್ಯ ಆಚಾರ್ ಚಿತ್ತೂರು, ಶ್ರೀಮತಿ ಕಸ್ತೂರಿ ಎಸ್.ಶೆಟ್ಟಿ ಚಿತ್ತೂರು, ರಾಮಚಂದ್ರ ಮಂಜ ಚಿತ್ತೂರು, ಸುನೀಲ್ ನಾಯ್ಕ್ ಕೆರಾಡಿ, ಶ್ರೀಮತಿ ನಾಗರತ್ನ ಶೆಟ್ಟಿ ಹೊಸೂರು, ಶೇಖರ ಶೆಟ್ಟಿ ಬೆಳ್ಳಾಲ, ಶಿವಪ್ಪ ಶೆಟ್ಟಿ ಜನ್ನಾಲು, ವಲಯ ಮೇಲ್ವಿಚಾರಕರಾದ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರವೀಣ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

Click Here

LEAVE A REPLY

Please enter your comment!
Please enter your name here