ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ತ್ರಾಸಿ ಆಟೋ ರಿಕ್ಷಾ ಚಾಲಕ ಉದಯ ಖಾರ್ವಿ ಅವರು ಪ್ರಯಾಣಿಕರಿಗೆ ಉಚಿತ ಆಟೋ ಸೇವೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ.
ತ್ರಾಸಿ ರಿಕ್ಷಾ ನಿಲ್ದಾಣದಲ್ಲಿ ಆಟೋ ರಿಕ್ಷಾ ವೃತ್ತಿ ನಡೆಸುತ್ತಿರುವ ಉದಯ ಖಾರ್ವಿ ಅವರು ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಕಳೆದ ಐದು ವರ್ಷಗಳಿಂದ ತ್ರಾಸಿ ಮತ್ತು ಸುತ್ತಮುತ್ತಲಿನ 15 ಕಿ.ಮೀ ವ್ಯಾಪ್ತಿಯಲ್ಲಿ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯ ತನಕ ರಿಕ್ಷಾ ಪ್ರಯಾಣಿಕರಿಗೆ ಉಚಿತ ಆಟೋ ಸೇವೆ ನೀಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿರುವ ಉದಯ ಖಾರ್ವಿ ಅವರು ಈ ವರ್ಷ ಕೂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮಂಗಳವಾರ ಉಚಿತ ಆಟೋ ಸೇವೆ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇಡೀ ವಿಶ್ವವೇ ಮೆಚ್ಚುವ ನಾಯಕ, ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶಕ್ಕೆ ಸಲ್ಲಿಸುತ್ತಿರುವ ಸೇವೆ ಅವಿಸ್ಮರಣೀಯವಾದುದು. ಅವರ ಕಾರ್ಯವೈಖರಿಯಿಂದ ನಮ್ಮ ದೇಶ ಅನೇಕ ಸವಾಲುಗಳ ಮಧ್ಯೆಯೂ ಅಭಿವೃದ್ಧಿಯತ್ತ ಸಾಗುತ್ತಿದೆ. ದೇಶದ ಹೆಮ್ಮೆಯ ಪ್ರಧಾನ ಮಂತ್ರಿಯವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆಟೋ ಸೇವೆ ನೀಡಿ ಅಳಿಲ ಸೇವೆ ಸಲ್ಲಿಸಿದ್ದೇನೆ. ರಾಷ್ಟ್ರ ಕಂಡ ಅಪ್ರತಿಮ ನಾಯಕನಿಗೆ ಮತ್ತಷ್ಟು ಕಾಲ ರಾಷ್ಟ್ರ ಸೇವೆ ಮಾಡಲು ಅವಕಾಶ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಉದಯ ಖಾರ್ವಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.