ಕುಂದಾಪುರ ಮಿರರ್ ಸುದ್ದಿ…
ಕೋಟ: ವಡ್ಡರ್ಸೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ವಡ್ಡರ್ಸೆ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತೋತ್ಸವ ಕಾರ್ಯಕ್ರಮ ಭಾನುವಾರ ಮಧುವನದ ಶ್ರಿದೇವಿ ಕಾಂಪ್ಲೆಕ್ಸ್ ಎದುರು ಜರಗಿತು.
ಬಿಲ್ಲವ ಸಮುದಾಯದ ಶ್ರೀಗಳಾದ ನಿಪ್ಪಾಣಿಯ ಶ್ರೀ ಶ್ರೀ ಅರುಣಾನಂದ ಸ್ವಾಮೀಜೀ ಆಶೀರ್ವಾಚನ ನೀಡಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ ಬ್ರಹ್ಮಶ್ರೀಗಳ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯತೆಯನ್ನು ಒತ್ತಿ ಹೇಳಿದರಸಲ್ಲದೆ ಸಮಾಜದ ಓರೆಕೋರೆಗಳನ್ನು ಸಾಮಾಜಿಕ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು ಸಮಾಜದಲ್ಲಿ ಒಗ್ಗಟ್ಟಿನಿಂದ ಸಾಮರಸ್ಯದಿಂದ ಜೀವನ ಸಾಗಿಸಲು ಕರೆಕೊಟ್ಟರು.
ಇದೇ ವೇಳೆ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವ ಅಧ್ಯಕ್ಷ , ಗ್ರಾಮ ಪಂಚಾಯಿತ್ ಸದಸ್ಯ ಕೆ. ಪಿ ಕೋಟಿ ಪೂಜಾರಿ ಹಾಗೂ ಪತ್ನಿ ಕೆ. ಎಸ್ ಪರಿಮಳ ಇವರುಗಳನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಡ್ಡರ್ಸೆ ಬಿಲ್ಲವ ಸಂಘದ ಅಧ್ಯಕ್ಷ ಸುಕೇಶ್ ಪೂಜಾರಿ ,ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಕಾಂಚನ್, , ವಡ್ಡರ್ಸೆ ಬಿಲ್ಲವ ಸಂಘದ ಮಾಜಿ ಅಧ್ಯಕ್ಷೆ ಶಾರದಾರಾಮ ಪೂಜಾರಿ , ವಡ್ಡರ್ಸೆ ಗ್ರಾಮ ಪಂಚಾಯಿತ್ ಸದಸ್ಯರಾದ ಹರೀಶ್ ಶೆಟ್ಟಿ, ರೇಖಾ ಶರತ್ ಶೆಟ್ಟಿ ಉಪಸ್ಥಿತರಿದ್ದರು. ಬಿಲ್ಲವ ಮುಖಂಡರಾದ ಭಾಸ್ಕರ್ ಪೂಜಾರಿ ಕುದುರಿಕಟ್ಟೆ ಸ್ವಾಗತಿಸಿದರು. ಸಂಘದ ಜತೆ ಕೋಶಾಧಿಕಾರಿ ಪ್ರದೀಪ್ ಪೂಜಾರಿ ಸನ್ಮಾನಪತ್ರ ವಾಚಿಸಿದರು. ಕಾರ್ಯಕ್ರಮವನ್ನು ಸಂಘದ ಸದಸ್ಯೆ ಸರೋಜ ಪೂಜಾರಿ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ, ವೇಣುಗೋಪಾಲ ಭಜನಾ ತಂಡ ಉಪ್ಲಾಡಿ, ಶ್ರೀ ಮಹಾಲಿಂಗೇಶ್ವರ ವಡ್ಡರ್ಸೆ ಇವರುಗಳಿಂದ ಭಜನೆ ಕಾರ್ಯಕ್ರಮ ಜರಗಿತು.