ಕುಂದಾಪುರ :ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಆನಂದ್ ಸಿ.ಕುಂದರ್ ಆಯ್ಕೆ

0
85

ಕುಂದಾಪುರ ಮಿರರ್ ಸುದ್ದಿ…

ಕೋಟ: ಸರಕಾರಿ ಶಾಲಾ ಎಸ್‍ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ಇವರ ಕೊಡಮಾಡುವ 2024-25 ಸಾಲಿನ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಆಯ್ಕೆಯಾಗಿದ್ದಾರೆ.

Click Here

Click Here

ಆನಂದ್ ಸಿ.ಕುಂದರ್ ಅವರು ಜಿಲ್ಲೆಯ ಬಹುತೇಕ ಸರಕಾರಿ ಶಾಲೆಗಳಿಗೆ ಅಗತ್ಯತೆಯನ್ನು ಗಮನಿಸಿ ಅತೀ ದೊಡ್ಡ ಮಟ್ಟದಲ್ಲಿ ಸಹಾಯ ಸಹಕಾರ ನೀಡುವುದರ ಜೊತೆಗೆ ಪ್ರತಿ ವರ್ಷ ಗೀತಾನಂದ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ನೋಟ್ ಬುಕ್ ವಿತರಣೆ ಮಾಡುತ್ತಿದ್ದಾರೆ. ಅಲ್ಲದೇ ಸ್ಕೂಲ್ ಮತ್ತು ಆಯುರ್ವೇದ ಮೆಡಿಕಲ್ ಕಾಲೇಜು ಸ್ಥಾಪಿಸಿ, ಗ್ರಾಮೀಣ ಭಾಗದ ಮಕ್ಕಳು ಕೂಡ ವೈದ್ಯರಾಗುವ ಅವಕಾಶ ಮಾಡಿ ಕೊಟ್ಟಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಸೆ.29ರಂದು ಬೆಳಗ್ಗೆ 10ಕ್ಕೆ ಆನೆಗುಡ್ಡೆ ಶ್ರೀ ವಿನಾಯಕ ಸಭಾಭವನ ಜರುಗಲಿದೆ.

Click Here

LEAVE A REPLY

Please enter your comment!
Please enter your name here