ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕುಂದಾಪುರ, ಎಂ.ಜಿ.ಫ್ರೆಂಡ್ಸ್ ಕುಂಭಾಸಿ, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ತೆಕ್ಕಟ್ಟೆ ಘಟಕ, ಸೈಕಲ್ ಅಸೋಸಿಯೇಶನ್ ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ಹೃದಯ ದಿನಾಚರಣೆ ಹಾಗೂ ಈ ಪ್ರಯುಕ್ತ ಸೆ.29ರಂದು ಸೈಕಲ್ ಜಾಥ ಯೋಧ-2024 ಕಾರ್ಯಕ್ರಮವು ಜರುಗಲಿದೆ.
ಬೆಳಿಗ್ಗೆ 6.30ಕ್ಕೆ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೈಕಲ್ ಜಾಥಕ್ಕೆ ಚಾಲನೆ ನೀಡಲಿದ್ದಾರೆ.
ಬಳಿಕ ಕುಂದಾಪುರದಿಂದ ಕುಂಭಾಸಿ ತನಕ ಜಾಥವು ಸಾಗಿ ಬಂದು ಬೆಳಿಗ್ಗೆ 9 ಗಂಟೆಗೆ ಕುಂಭಾಸಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ, ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಗೀತಾನಂದ ಫೌಂಡೇಶನ್ನ ಪ್ರವರ್ತಕ ಆನಂದ ಸಿ ಕುಂದರ್, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.