ತೆಕ್ಕಟ್ಟೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

0
81

ಕುಂದಾಪುರ ಮಿರರ್ ಸುದ್ದಿ…

ಕೋಟ: ಸರಕಾರಿ ಪದವಿಪೂರ್ವ ಕಾಲೇಜು ತೆಕ್ಕಟ್ಟೆ, ಗ್ರಾಮ ಪಂಚಾಯತ್ ತೆಕ್ಕಟ್ಟೆ ಹಾಗೂ ಎಸ್‍ಎಲ್‍ಆರ್‍ಎಂ ಘಟಕ ತೆಕ್ಕಟ್ಟೆ, ಇದರ ನೇತೃತ್ವದಲ್ಲಿ ಗಾಂಧಿಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

Click Here

ಈ ಸಂದರ್ಭದಲ್ಲಿ ಸಂಸ್ಥೆಯ ಇಂಟರ್ಯಾಕ್ಟ್ ಕ್ಲಬ್ , ಇಕೋ ಕ್ಲಬ್‍ನ ಪದಾಧಿಕಾರಿಗಳು ಮತ್ತು ಸದಸ್ಯರು ಮತ್ತು ಎಸ್‍ಎಲ್‍ಆರ್‍ಎಂ ಘಟಕ, ಸ್ವಚ್ಛತಾ ಸೇವಕರು ರಾಷ್ಟ್ರೀಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡರು. ಕಾರ್ಯಕ್ರಮದ ನಂತರ ಸ್ವಚ್ಛತಾ ಪ್ರತಿಜ್ಞಾವಿಧಿ ಭೋದಿಸಲಾಯಿತು.

ಈ ಸಂದರ್ಭದಲ್ಲಿ ತೆಕ್ಕಟ್ಟೆ ಪದವಿ ಕಾಲೆಜಿನ ಪ್ರಭಾರ ಪ್ರಾಂಶುಪಾಲರಾದ ಶಾರದಾ ಹೊಳ್ಳ,ಉಪ ಪ್ರಾಂಶುಪಾಲರಾದ ಸಂಧ್ಯಾರಾಣಿ .ಕೆ, ಎಸ್ .ಬಿ.ಸಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾಲೇಜಿನ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ರಾಘವೇಂದ್ರ ಪುರಾಣಿಕ್ , ತೆಕ್ಕಟ್ಟೆ ಎಸ್‍ಎಲ್‍ಆರ್‍ಎಂ ಘಟಕದ ಮೇಲ್ವಿಚಾರಕಿ ರೇವತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here