ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 40ರ ಸಂಭ್ರಮ, ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಅ.17ರ ಗುರುವಾರ ಸಂಜೆ 4.30ಕ್ಕೆ ನಡೆಯಲಿದ್ದು ಕೃಷಿ ಕ್ಷೇತ್ರದ ಸಾಧಕ ಬ್ರಹ್ಮಾವರ ತಾಲೂಕಿನ ಕೋಟತಟ್ಟುವಿನ ಚಂದ್ರಶೇಖರ್ ಗಾಣಿಗ ಇವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.