ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ರಿಷಿಕಾ ಆರ್. ದೇವಾಡಿಗ ಪರಂಪರಾ ಕಲ್ಚರಲ್ ಫೌಂಡೇಶನ್, ಬೆಂಗಳೂರು ಆಯೋಜಿಸಿದ್ದ ರಾಜ್ಯ ಮಟ್ಟದ ದೇಶಭಕ್ತಿ ಗೀತಾ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಡೆದಿದ್ದು, ಸ್ಪರ್ಧೆಯಲ್ಲಿ 262 ಸ್ಪರ್ಧಾರ್ಥಿಗಳು, ಅವುಗಳಲ್ಲಿ ದೇಶ ಮತ್ತು ವಿದೇಶದ ಅನಿವಾಸಿ ಭಾರತೀಯರು ಭಾಗವಹಿಸಿದ್ದರು.
ರಿಷಿಕಾ ಅವರು ಬಹುಮುಖ ಪ್ರತಿಭೆಯನ್ನು ಹೊಂದಿದ್ದು, ಇದುವರೆಗೆ ಹಲವಾರು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತಳಾಗಿರುವುದು ಗಮನಾರ್ಹ ಸಂಗತಿಯಾಗಿದೆ. ಬೈಂದೂರಿನ ರಾಮ ದೇವಾಡಿಗ ಮತ್ತು ರೂಪಾ ದೇವಾಡಿಗ ದಂಪತಿಯ ಮಗಳಾದ ರಿಷಿಕಾ, ಪ್ರತಿ ಬಾರಿ ತನ್ನ ಪ್ರತಿಭೆಯನ್ನು ಮೆರೆದಿರುವುದು ಹೆಮ್ಮೆಯ ವಿಷಯವಾಗಿದೆ.