ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಪ್ರಸಿದ್ಧ ದೇಗುಲ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಕಾತಾಂರ ಚಿತ್ರದ ನಾಯಕನಟ ರಿಷಭ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಕುಟುಂಬಿಕರೊಂದಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಶಾಲು ಹೋದಿಸಿ ಪ್ರಸಾದ ನೀಡಿ ಗೌರವಿಸಿದರು.
ದೇಗುಲದ ಆಡಳಿತ ಮಂಡಳಿಯ ಸದಸ್ಯ ಚಂದ್ರ ಆಚಾರ್, ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ಅರ್ಚಕರಾದ ದೀಕ್ಷಿತ್ ಜೋಗಿ, ಗಿರೀಶ್ ಜೋಗಿ ಮತ್ತಿತರರು ಇದ್ದರು.