ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜು ಬಸ್ರೂರು ಇಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ದೀಪಾಲಂಕಾರ ಸ್ಪರ್ಧೆ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕರಾದ ಬಿ. ಅಪ್ಪಣ್ಣ ಹೆಗ್ಡೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ದೀಪಾವಳಿ ಹಬ್ಬದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ವಿವರಿಸಿ ಎಲ್ಲರಿಗೂ ಈ ಹಬ್ಬ ಶುಭವನ್ನು ತರಲಿ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಾರದ ಪುರುಶೋತ್ತಮ ಬಲ್ಯಾಯ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಾವತಿ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ , ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ದೀಪಾವಳಿ ಹಬ್ಬದ ಪ್ರಯುಕ್ತ ಕಾಲೇಜಿನಲ್ಲಿ ಶಾರದಾ ಪೂಜೆ ನಡೆಯಿತು ಮತ್ತು ವಿದ್ಯಾರ್ಥಿಗಳಿಗೆ ದೀಪಾಲಂಕಾರ ಸ್ಪರ್ಧೆ ನಡೆಸಲಾಯಿತು.