ಕುಂದಾಪುರ ಮಿರರರ್ ಸುದ್ದಿ…
ಕುಂದಾಪುರ: ಡಿ.10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಎಲ್ಲರೂ ಒಟ್ಟಾಗಿ ಒಂದಾಗಿ ಪೂರ್ಣ ಬಹುಮತದಿಂದ ಗೆಲ್ಲಿಸುವುದರ ಮೂಲಕ ಭಾರತೀಯ ಜನತಾ ಪಾರ್ಟಿಯಿಂದ ಒಳ್ಳೆಯ ಸಂದೇಶ ಹೋಗಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.
ಅವರು ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಕುಂದಾಪುರ ಮಂಡಲ ವತಿಯಿಂದ ಗುರುವಾರ ಜರಗಿದ ಬಿಜೆಪಿ ಕುಂದಾಪುರ, ಕೋಟೇಶ್ವರ ಮತ್ತು ಬೀಜಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಪುರಸಭೆ ಮತ್ತು ಗ್ರಾಮ ಪಂಚಾಯತ್ ಸದಸ್ಯರ ಚುನಾವಣಾ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿ, ನನ್ನ ಮಿತಿಯೊಳಗೆ 13 ವರ್ಷಗಳಿಂದ ನಿರಂತರವಾಗಿ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಪರವಾಗಿ ಕೆಲಸಗಳನ್ನು ಮಾಡಿದ್ದೇನೆ ಎಂಬ ವಿಶ್ವಾಸವಿದೆ. ಬಿಜೆಪಿಯಿಂದ ನಾನೊಬ್ಬನೇ ಅಭ್ಯರ್ಥಿಯಾಗಿದ್ದು, 1 ಅಂಕೆಯನ್ನು ಮಾತ್ರ ಬರೆಯುವ ಮೂಲಕ ಒಂದೇ ಮತವನ್ನು ಚಲಾಯಿಸಿ ಪಂಚಾಯತ್ ರಾಜ್ ಸಬಲೀಕರಣಕ್ಕಾಗಿ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದರು.
ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.
ಕುಂದಾಪುರ ಮಂಡಳದ ಅಧ್ಯಕ್ಷ ಶಂಕರ ಅಂಕದಕಟ್ಟೆ ಪ್ರಾಸ್ತಾವಿಕ ಮಾತನಾಡಿದರು. ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಬೀಜಾಡಿ ಸ್ವಾಗತಿಸಿದರು. ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು.