ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಪ್ರಮಾಣಿಕರಿಗೆ ಪ್ರಶಸ್ತಿಗಳು ಸಿಗಬೇಕು. ಇದರಿಂದ ಪ್ರಶಸ್ತಿಗೆ ಗೌರವ ಸಿಗುತ್ತದೆ. ಈ ನಿಟ್ಟಿನಲ್ಲಿ ಪತ್ರಕರ್ತ ಪ್ರಭಾಕರ ಆಚಾರ್ಯ ಅವರಿಗೆ ಪ್ರಶಸ್ತಿ ಸಿಕ್ಕಿದೆ. ಪ್ರಭಾಕರ ಆಚಾರ್ಯ ಅವರು ಗ್ರಾಮೀಣ ಭಾಗದ ಚಿತ್ತೂರಿನಲ್ಲಿ ಹುಟ್ಟಿ ಬ್ರಹ್ಮಾವರದಲ್ಲಿ ಪತ್ರಿಕೋದ್ಯಮ ಆರಂಭಿಸಿದರು. ಅವರು ಸಾತ್ವಿಕ ಬರವಣಿಗೆಯ ಮೂಲಕ ಹೆಸರು ಪಡೆದು, ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
ಅವರು ಮಾರಣಕಟ್ಟಿ ಶ್ರೀ ಬ್ರಹ್ಮಲಿಂಗೇಶ್ವರ ಸಭಾ ಭವನದಲ್ಲಿ ಚಿತ್ತೂರು ಗ್ರಾಮಸ್ಥರು ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ನೇತ್ರತ್ವದಲ್ಲಿ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ಅವರಿಗೆ ಹೂಟ್ಟೂರು ಸಮಾನ ನೆರವೇರಿಸಿ, ಮಾತನಾಡಿದರು.
ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹೂಟ್ಟೂರು ಸಮ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಣ ಮಾಡಿದವರು ಶ್ರೀಮಂತರಲ್ಲ, ಸಾವಿರಾರೂ ಜನರ ಅಭಿಮಾನ ಪಡೆದವರೇ ಶ್ರೀಮಂತರು. ಪ್ರಶಸ್ತಿ ಲಭಿಸಬೇಕಾದರೂ ಯೋಗ ಹಾಗೂ ಯೋಗ್ಯತೆ ಬೇಕು. ಈ ಎರಡು ಗುಣಗಳು ಪ್ರಭಾಕರ ಆಚಾರ್ಯ ಅವರಲ್ಲಿ ಇದೆ ಎಂದರು.
ಮುಖ್ಯ ಅತಿಥಿಗಳಾಗಿ ಚಿತ್ರಕೂಟದ ವೈದ್ಯ ಡಾ। ರಾಜೇಶ್ ಬಾಯರಿ, ಧಾರ್ಮಿಕ ಮುಖಂಡ ವಂಡಬಳ್ಳಿ ಜಯರಾಮ್ ಶೆಟ್ಟಿ, ಡಾ। ಅತುಲ್ ಕುಮಾರ ಶೆಟ್ಟಿ, ಜಿ.ಪಂ ಮಾಜಿ ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ, ಬ್ರಹ್ಮಾವರ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ, ವಂಡ್ಸೆ ಗ್ರಾ.ಪಂ. ಮಾಜಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಚಿತ್ತೂರು ಗ್ರಾ.ಪಂ. ಅಧ್ಯಕ್ಷ ರವಿರಾಜ್ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಉದಯ ಪೂಜಾರಿ, ರಥ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ನಿರ್ಮಾಲ ಪ್ರಭಾಕರ ಆಚಾರ್ಯ ಚಿತ್ತೂರು ಮೊದಲಾದವರು ಉಪಸ್ಥಿತರಿದ್ದರು.
ಉದಯಕುಮಾರ ಶೆಟ್ಟಿ ಸ್ವಾಗತಿಸಿದರು. ದಾಮೋದರ ಶರ್ಮಾ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕ ಬಾಲಕೃಷ್ಣ ಶೆಟ್ಟಿ ವಂದಿಸಿದರು.