ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ ಇಲ್ಲಿ ನ.23 ಶನಿವಾರ ವಿವಿಧ ಸಾಧಕರಿಗೆ ಅಭಿನಂದನ ಕಾರ್ಯಕ್ರಮ ನಡೆಯಿತು.
ಶಾಲೆಯ ಹಳೆ ವಿದ್ಯಾರ್ಥಿ, ಮುದ್ರಣ ವಿಭಾಗದ ನೈಪುಣ್ಯತೆಗಾಗಿ ಅತ್ಯುತ್ತಮ ಮುದ್ರಣಕಾರರಿಗೆ ನೀಡುವ ಅಂತರಾಷ್ಟ್ರೀಯ ಮಟ್ಟದ ಚಾಣಕ್ಯ ಪ್ರಶಸ್ತಿ ಪಡೆದ ಬಿ. ಕುಸುಮಾಕರ ಶೆಟ್ಟಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಸರಕಾರದ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ, ದಕ್ಷಿಣ ಭಾರತ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಗೌರವ ಪುರಸ್ಕೃತರಾದ ಸ್ಥಳೀಯ ಶಾಲೆಯ ಹಳೆ ವಿದ್ಯಾರ್ಥಿಗಳಾದ ಪ್ರಜ್ಞಾ, ಶ್ರೇಯಾ, ಮೇಘನಾ ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಹಕ್ಲಾಡಿ ಗ್ರಾಮ ಪಂಚಾಯಿತಿನ ಉಪಾಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಹೊಳ್ಮಗೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಬಿ.ಎನ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಿ.ರಾಜೀವ ಶೆಟ್ಟಿ, ಪಂಚಗಂಗಾ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಊರಿನ ಹಿರಿಯ ಪುರೋಹಿತರಾದ ನಾಗಪ್ಪಯ್ಯ ಭಟ್, ಪಂಚಾಯತ್ ಸದಸ್ಯರಾದ ಅಶೋಕ್ ಪೂಜಾರಿ, ಶಾರದಾ ಹಕ್ಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಜಿತ್, ಎಸ್.ಡಿ.ಎಮ್.ಸಿ ಅಧ್ಯಕ್ಷೆ ಭಾವನಾ ಭಟ್ ಉಪಸ್ಥಿತರಿದ್ದರು.
ಪಂಜದ ಗುತ್ತು ಶಾಂತರಾಮ ಶೆಟ್ಟಿ, ಸರಕಾರಿ ಪ್ರೌಢಶಾಲೆ ಕೆಮ್ರಾಲು ಮಂಗಳೂರು ಇದರ ಮುಖ್ಯೋಪಾಧ್ಯಾಯರಾದ ಡಾ. ಕಿಶೋರ್ ಕುಮಾರ್ ಶೆಟ್ಟಿ ಅವರು ಅಭಿನಂದನಾ ಭಾಷಣ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯನಿ ಶೈಲಜಾ ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕಿ ಪೂರ್ಣಿಮಾ ಶೆಟ್ಟಿ, ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ವಂದಿಸಿದರು. ಶಿಕ್ಷಕವೃಂದ ಸಹಕರಿಸಿದರು.