ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 2ರಿಂದ 5ರವೆರೆಗೆ ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ಶಾಸಕರ ಮಾರ್ಗದರ್ಶನದಲ್ಲಿ “ಬೃಹತ್ ವಿಜ್ಞಾನ, ವಾಣಿಜ್ಯ, ಕಲೆ, ಪರಿಸರ ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನ-2024” ನಡೆಯಲಿದೆ.
ಡಿ.2ರಂದು ಬೆಳಿಗ್ಗೆ 10.30ಕ್ಕೆ ಸ್ವಪ್ನಶಿಲ್ಪಿ ಡಾ.ಹೆಚ್.ಶಾಂತಾರಾಮ್ ಅವರಿಗೆ “ಭಾವಾಭಿನಂದನಾ ಸಮಾರಂಭ” ನಡೆಯಲಿದೆ.
ಡಿಸೆಂಬರ್ 5ರಂದು ಬೆಳಿಗ್ಗೆ 10.30ಕ್ಕೆ “ಸಂಸ್ಥಾಪಕರ ದಿನಾಚರಣೆ ಸಮಾರಂಭ” ನಡೆಯಲಿದೆ ಎಂದು ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯ ಶಾಂತಾರಾಮ ಪ್ರಭು ತಿಳಿಸಿದರು.
ಅವರು ಭಂಡರ್ಕಾಸ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.
ವಿಶ್ವಸ್ಥ ಮಂಡಳಿ ಸದಸ್ಯರಾದ ಯು.ಎಸ್ ಶೆಣೈ ಮಾತನಾಡಿ, ಈ ವಸ್ತು ಪ್ರದರ್ಶನದಲ್ಲಿ ಸುಮಾರು 90ಕ್ಕೂ ಹೆಚ್ಚು ಮಳಿಗೆಗಳು ಇರಲಿದೆ. ಕೃಷಿ, ಪಶುಸಂಗೋಪನೆ, ಅರಣ್ಯ, ವಾರ್ತಾ ಮತ್ತು ಪ್ರಚಾರ, ಸಾರ್ವಜನಿಕ ಶಿಕ್ಷಣ, ಪ್ರವಾಸೋದ್ಯಮ, ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡೆ, ತೋಟಗಾರಿಕೆ, ಸಾಮಾಜಿಕ ಅರಣ್ಯ, ಕೈಗಾರಿಕೆ ಮತ್ತು ವಾಣಿಜ್ಯ, ಸಹಕಾರ, ಕನ್ನಡ ಮತ್ತು ಸಂಸ್ಕೃತಿ, ಕೌಶಲ್ಯಾಭಿವೃದ್ಧಿ, ಆರಕ್ಷಕ, ಅಗ್ನಿಶಾಮಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು, ಕ್ಯಾಂಪ್ಕೋ ಮಂಗಳೂರು ಮತ್ತು ವಿವಿಧ ಬ್ಯಾಂಕುಗಳು ಭಾಗವಹಿಸಲಿದ್ದಾರೆ ಎಂದರು.
ಡಿ.2ರಂದು ಬೆಳಿಗ್ಗೆ 10ಗಂಟೆಗೆ ಪುರ ಮೆರವಣಿಗೆಯನ್ನು ಕುಂದಾಪುರ ತಾಲೂಕು ತಹಶೀಲ್ದಾರ್ ಶೋಭಲಕ್ಷ್ಮಿ ಉದ್ಘಾಟಿಸಲಿದ್ದಾರೆ. ಪುರಸಭಾ ಅಧ್ಯಕ್ಷರಾದ ಮೋಹನದಾಸ ಶೆಣೈ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಡಿ.3ರಂದು ಬೆಳಿಗ್ಗೆ 10ಗಂಟೆಗೆ ಶೈಕ್ಷಣಿಕ ಮಾಹಿತಿ ವಸ್ತು ಪ್ರದರ್ಶನವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ತಾಲೂಕು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಬೃಹತ್ ಆರೋಗ್ಯ ಮೇಳವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಉದ್ಘಾಟಿಸಲಿದ್ದಾರೆ.
“ಸರ್ಕಾರಿ ಇಲಾಖೆಗಳ ಬ್ರಹತ್ ವಸ್ತು ಪ್ರದರ್ಶನ” ವನ್ನು ಉಡುಪಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಐಎಎಸ್ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಉಡುಪಿ ಜಿಲ್ಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ವಿದ್ಯಾಂಗ ಉಪ ನಿರ್ದೇಶಕ ಗಣಪತಿ ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾಲೇಜು ವಿದ್ಯಾರ್ಥಿಗಳ ವಸ್ತು ಪ್ರದರ್ಶನವನ್ನು ಕುಂದಾಪುರ ತಾಲೂಕಾ ಸಹಾಯಕ ಆಯುಕ್ತರಾದ ಮಹೇಶ್ಚಂದ್ರ ಉದ್ಘಾಟಿಸಲಿದ್ದಾರೆ. ಕುಂದಾಪುರ ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ರವಿಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ವಸ್ತು ಪ್ರದರ್ಶನದ ಮಳಿಗೆಯನ್ನು ಮಾಜಿ ಶಾಸಕರಾದ ಅಪ್ಪಣ್ಣ ಹೆಗ್ಡೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ
ಸಂಸದರಾದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಉದ್ಯಮಿಗಳಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಕಲಾಕ್ಷೇತ್ರದ ಅಧ್ಯಕ್ಷ ಕಿಶೋರ್ ಕುಮಾರ್, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕಾಸ್ಟ್ರೋ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಕಾನಮಕ್ಕಿ, ಭಂಡಾರ್ಕಾಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಹರಿ ಚಾತ್ರ, ಅಧ್ಯಕ್ಷರು, ಕಾರ್ಯದರ್ಶಿ ಸಂದೇಶ್ ಕೆ., ರಕ್ಷಕ-ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಕಾಮತ್, ಕಾರ್ಯದರ್ಶಿ ಸಂಜೀವ ತೆಕ್ಕಟ್ಟೆ ಆಗಮಿಸಲಿದ್ದಾರೆ.
ದಿನಾಂಕ 4 ರಂದು ಬೆಳಿಗ್ಗೆ 10ಗಂಟೆಗೆ ವೃತ್ತಿ ಮಾರ್ಗದರ್ಶನ ಹಾಗೂ ಕೈಗಾರಿಕಾ ಮಾಹಿತಿ ಶಿಬಿರ ನಡೆಯಲಿದೆ. ಉಡುಪಿ
ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶೋಬಾ ಶೆಟ್ಟಿ, ಉದ್ಯಮಿ ದತ್ತಾನಂದ ಗಂಗೊಳ್ಳಿ, ಜನತಾ ಫಿಶ್ ಮಿಲ್ ಮತ್ತು ಆಯಿಲ್ ಪ್ರಾಡಕ್ಟ್ ನ ಆನಂದ್. ಸಿ.ಕುಂದರ್, ಕೋಟ ಅವರು ಆಗಮಿಸಲಿದ್ದಾರೆ. ಡಿ.5 ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಶಾಂತಾರಾಮ್ ಎ.ಭಂಡಾರ್ಕಾರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ರಾಘವೇಂದ್ರ, ಲೆಕ್ಕ ಪರಿಶೋಧಕರಾದ ಶಾಂತಿ ಗಿರಿಧರ್, ಪುರಸಭೆ ಉಪಾಧ್ಯಕ್ಸೆ ವನಿತ ಬಿಲ್ಲವ ಆಗಮಿಸಲಿದ್ದಾರೆ.
ಡಿಸೆಂಬರ್ 2ರಿಂದ 5ರವೆರೆಗೆ ಕೆಎಂಸಿ ಮಣಿಪಾಲ, ಕುಂದಾಪುರ ತಾಲೂಕು ಆರೋಗ್ಯ ಇಲಾಖೆ, ಆಯುಷ್ ಇಲಾಖೆ,
ಎಸ್.ಡಿ.ಎಂ ಆಯುರ್ವೇದ ಕಾಲೇಜು ಆಸ್ಪತ್ರೆ, ಕುತ್ಪಾಡಿ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಇವರ
ಸಹಯೋಗದಲ್ಲಿ “ಬೃಹತ್ ಆರೋಗ್ಯ ಮೇಳ” ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಭಂಡಾರ್ಕಾಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಂ ಗೊಂಡ ಉಪಸ್ಥಿತರಿದ್ದರು.
ಡಿ.2ರಂದು ಸ್ವಪ್ನಶಿಲ್ಪಿ ಡಾ.ಹೆಚ್.ಶಾಂತಾರಾಮ್ ಅವರಿಗೆ ಭಾವಾಭಿನಂದನೆ
ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 2ರಂದು ಬೆಳಿಗ್ಗೆ 10,30ಕ್ಕೆ ಸ್ವಪ್ನಶಿಲ್ಪಿ ಡಾ.ಹೆಚ್.ಶಾಂತಾರಾಮ್ ಅವರಿಗೆ “ಭಾವಾಭಿನಂದನಾ ಸಮಾರಂಭ” ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇದರ ಅಧ್ಯಕ್ಷರಾದ ಡಾ.ಹೆಚ್.ಎಸ್. ಬಲ್ಲಾಳ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ನೆರವೇರಿಸಲಿದ್ದಾರೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎ.ಎಸ್.ಎನ್.ಹೆಬ್ಬಾರ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇದರ ಕಾರ್ಯದರ್ಶಿಗಳಾದ ಬಿ.ಪಿ.ವರದರಾಯ ಪೈ ಮತ್ತು ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ಆಗಮಿಸಲಿದ್ದಾರೆ.
ಡಿಸೆಂಬರ್ 5ರಂದು ಬೆಳಿಗ್ಗೆ “ಸಂಸ್ಥಾಪಕರ ದಿನಾಚರಣೆ” ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 5ರಂದು ಬೆಳಿಗ್ಗೆ 10,30ಕ್ಕೆ “ಸಂಸ್ಥಾಪಕರ ದಿನಾಚರಣೆ ಸಮಾರಂಭ” ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಶಾಂತಾರಾಮ್ ಎ.ಭಂಡಾರ್ಕಾರ್ ವಹಿಸಲಿದ್ದಾರೆ. ಸಂಸ್ಥಾಪನಾ ದಿನಾಚರಣೆಯ ವಿಶೇಷ ಬಾಷಣವನ್ನು ಲೆಕ್ಕ ಪರಿಶೋಧಕರಾದ ಶಾಂತಿ ಗಿರಿಧರ್ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ಆಗಮಿಸಲಿದ್ದಾರೆ.