ಕೋಟದ ಪಂಚವರ್ಣ ಸಂಸ್ಥೆಯಿಂದ ಮಾದಕ ವ್ಯಸನ ಮುಕ್ತ ಸಮಾಜ ಸರಣಿ ಕಾರ್ಯಾಗಾರ

0
58

ಕುಂದಾಪುರ ಮಿರರ್ ಸುದ್ದಿ…

ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮಗಳ ನಡುವೆ ಇದೀಗ ಮೊದಲ ಬಾರಿಗೆ ಕಾಲೇಜು ವಿದ್ಯಾರ್ಥಿಗಳಿಗೆ ವ್ಯಸನ ಮುಕ್ತ ಸಮಾಜದ ಅರಿವು ಮೂಡಿಸುವ ದೃಷ್ಟಿಯಿಂದ ವ್ಯಸನಮುಕ್ತ ಸಮಾಜ ಸಂತಸದ ನಾಳೆಗಾಗಿ ಎನ್ನುವ ಶೀರ್ಷಿಕೆಯಡಿ ಸರಣಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಇದೇ ಬರುವ ನ.30ರಂದು ಕೋಟದ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಸಲಿದೆ.

Click Here

Click Here

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾಸ್ಪತ್ರೆಯ ಮನೋವೈದ್ಯ ವಿಭಾಗದ ಮುಖ್ಯಸ್ಥೆ ಡಾ.ಋತಿಕಾ ಸಾಲಿಯಾನ್ ಭಾಗವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ಶೈಕ್ಷಣಿಕ ಸಂಸ್ಥೆಗಳ ಪ್ರೋತ್ಸಾಹಕರಾದ ಉದ್ಯಮಿ ಆನಂದ್ ಸಿ ಕುಂದರ್ ಚಾಲನೆ ನೀಡಲಿದ್ದಾರೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here