ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಕ್ರೀಡೆ ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವುದು ಪದಕಗಳಿಸುವುದಕ್ಕೆ ಸೀಮಿತವಾಗಬಾರದು ಎಂದರು.
ಅಧ್ಯಕ್ಷ ಸ್ಥಾನವನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ..ರಾಧಾಕೃಷ್ಣ ಶೆಣೈಯವರು ವಿದ್ಯಾರ್ಥಿಗಳಿಗೆ ಆರೋಗ್ಯವೇ ಭಾಗ್ಯವಾಗಿರುವುದರಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿಸುವುದರ ಮೂಲಕ ಸದೃಢ ಆರೋಗ್ಯವನ್ನು ಹೊಂದಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.
ಆಕರ್ಷಕ ಪಥ ಸಂಚಲನ
ಕ್ರೀಡಾ ಕಾರ್ಯದರ್ಶಿ ಶಬರೀಶ್ ಪ್ರತಿಜ್ಞಾ ವಿಧಿ ಬೋಧಿಸಿದನು.
ವಿದ್ಯಾರ್ಥಿಗಳನ್ನು ಶ್ರದ್ಧಾ, ವಿದ್ಯಾ, ಉನ್ನತಿ ಹಾಗೂ ಪ್ರಜ್ಞಾ ತಂಡಗಳಾಗಿ ವಿಂಗಡಿಸಿ, ಆ ತಂಡಗಳಿಂದ ಪಥ ಸಂಚಲನ ನಡೆಸಲಾಯಿತು.
ವಿದ್ಯಾರ್ಥಿನಿಯರಾದ ಚೈತನ್ಯ ಅತಿಥಿಯನ್ನು ಪರಿಚಯಿಸಿ , ಅಲ್ವಿಟಾ ಸ್ವಾಗತಿಸಿ, ವಂಶಿಕ ವಂದಿಸಿ, ಶ್ರೀನಿಧಿಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.