ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಫೆಂಗಲ್ ಚಂಡಮಾರುತ ಅಬ್ಬರ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಡಿಸೆಂಬರ್ 3 ಮಂಗಳವಾರ) ಉಡುಪಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.