ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಲಯನ್ಸ್ ಕ್ಲಬ್ ಹಂಗಳೂರು ವತಿಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ಗೆ ನೆಲಹಾಸುಗಳನ್ನು ಹಾಕಿ ನವೀಕರಿಸುವ ಹಾಗೂ ಮೇಲ್ಚಾವಣಿಯನ್ನು ನಿರ್ಮಿಸಲು ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಡಿ.8 ಆದಿತ್ಯವಾರದಂದು ಅಪರಾಹ್ನ 3 ಗಂಟೆಗೆ ಶಿಲಾನ್ಯಾಸ ಕಾರ್ಯಕ್ರಮ ಜರುಗಲಿದ್ದು, ಉಡುಪಿ ಚಿಕ್ಕಮಂಗಳೂರು ಲೋಕಸಭಾ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ ಇವರು ಶಿಲಾನ್ಯಾಸ ಗೈಯಲಿದ್ದಾರೆ.
ಈ ಸಂದರ್ಭದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಲಯನ್ಸ್ ಜಿಲ್ಲೆ 317c ನ ಗವರ್ನರ್ ಮೊಹಮ್ಮದ್ ಹನೀಫ್, ಲಯನ್ಸ್ ಉಪಜಿಲ್ಲಾ ಗವರ್ನರ್ ಸಪ್ನಾ ಸುರೇಶ್, ಕೊಂಕಣ ರೈಲ್ವೆ ಪ್ರಾದೇಶಿಕ ಅಧಿಕಾರಿ ಆಶಾ ಶೆಟ್ಟಿ, ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಲಯನ್ಸ್ ಕ್ಲಬ್ ಹಂಗಳೂರು ಅಧ್ಯಕ್ಷ ರೋವನ್ ಡಿ’ ಕೋಸ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.