ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ :ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್. ರಿ. ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಆಯ್ಕೆಯಾಗಿರುತ್ತಾಳೆ.
ಆಯ್ಕೆಯಾದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.