ಕುಂದಾಪುರ: ಬೈಕ್ – ಗ್ಯಾಸ್ ಸಾಗಾಟದ ವಾಹನ ಡಿಕ್ಕಿ – ಸವಾರ ಸ್ಥಳದಲ್ಲಿಯೇ ಸಾವು

0
188

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಬೈಕ್ ಒಂದು ಗ್ಯಾಸ್ ಸಾಗಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ನಡೆದಿದೆ. ಅಪಘಾತದಲ್ಲಿ ಬಲಿಯಾದ ಬೈಕ್ ಸವಾರನನ್ನು ಮಂಗಳೂರು ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕೆಬಿ ಯುವರಾಜ್ ಬಲ್ಲಾಳ ಎಂಬುವರ ಪುತ್ರ ರಂಜಿತ್ ಬಲ್ಲಾಳ್(59) ಎಂದು ಗುರುತಿಸಲಾಗಿದೆ.

Click Here

ಸೋಮವಾರ ಸಂಜೆ ಸುಮಾರು 4:00ಗೆ ಅಪಘಾತ ನಡೆದಿದ್ದು ಬೈಕ್ ಸವಾರ ರಂಜಿತ್ ಬಲ್ಲಾಳ್ ತನ್ನ ಬಿ ಎಂ ಡಬ್ಲ್ಯೂ ಬೈಕ್ ನಲ್ಲಿ ಗೋವಾ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆರಾಟೆ ಸೇತುವೆ ದುರಸ್ತಿಗಾಗಿ ಕಳೆದ ಎರಡು ವಾರಗಳಿಂದ ವ್ಯವಸ್ಥೆ ಮಾಡಿದ್ದು ಈ ಸ್ಥಳ ಅಪಾಯಕಾರಿ ಸ್ಥಳವಾಗಿ ಪರಿಣಮಿಸಿದೆ.

ವೇಗವಾಗಿ ಬಂದ ಬೈಕ್ ಸವಾರ ಹೆಲ್ಮೆಟ್ ಧರಿಸಿದ್ದರೂ ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳೀಯರ ಸಹಕಾರದಿಂದ ಬೈಕ್ ಸವಾರನನ್ನು ಗಂಗೊಳ್ಳಿ ಆಪದ್ಬಾಂಧವ ಇಬ್ರಾಹಿಂ ಗಂಗೊಳ್ಳಿ ಮತ್ತು ಅಬ್ರರ್ ತನ್ನ ಅಂಬಿಲೆನ್ಸ್ ನಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಳೆದ ಒಂದು ವರ್ಷದಿಂದ ಸಂಪೂರ್ಣ ಅವ್ಯವಸ್ಥೆಗೆ ಇದಾಗಿದ್ದ ಪರಿಣಾಮ ಹಲವು ಅಪಘಾತಗಳು ಸಂಭವಿಸಿವೆ ಆದರೆ ಈ ಬಗ್ಗೆ ಎಚ್ಚೆತ್ತುಕೊಳ್ಳದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಾಮಗಾರಿ ನಡೆಸಿದ ಐಆರ್‌ಬಿ ಸಂಸ್ಥೆಯು ತನ್ನ ನಿರ್ಲಕ್ಷ ಧೋರಣೆಯನ್ನು ತೋರುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here