ಗಂಗೊಳ್ಳಿ: ಕಾಂಗ್ರೆಸ್ ತೆಕ್ಕೆಗೆ ಗಂಗೊಳ್ಳಿ ಗ್ರಾಮ ಪಂಚಾಯತ್

0
279

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಎರಡು ದಿನಗಳ ಬಳಿಕ ಗುರುವಾರ ಹೊರಬಿದ್ದಿದೆ. ಗುರುವಾರ ಬೆಳಗ್ಗಿನಿಂದಲೇ ಕುಂದಾಪುರದ ತಾಲೂಕು ಕಚೇರಿ ಮಿನಿ ವಿಧಾನಸೌಧದಲ್ಲಿ ನಡೆದ ಮತ ಎಣಿಕೆ ಕಾರ್ಯ ರಾತ್ರಿ ಅಂತ್ಯಗೊಂಡಿದೆ. ಬಿಜೆಪಿಯ ಭದ್ರಕೋಟೆಯಾಗಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಗೆ ಡಿಸೆಂಬರ್ 10 ರಂದು ನಡೆದ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪರವಾಗಿ ಹೊರಬಿದ್ದಿದೆ.

Click Here

Click Here

ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಒಟ್ಟು 33 ಸ್ಥಾನಗಳ ಪೈಕಿ 19 ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಪಡೆದುಕೊಂಡಿದ್ದಾರೆ. 12 ಸ್ಥಾನಗಳನ್ನು ಬಿಜೆಪಿ ತನ್ನ ವಶಕ್ಕೆ ಪಡೆದುಕೊಂಡಿದೆ. 2 ಸ್ಥಾನಗಳನ್ನು ಪಕ್ಷೇತರ ಅಭ್ಯರ್ಥಿಗಳು ಪಡೆದುಕೊಂಡಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತ್ ಆಡಳಿತದ ಗದ್ದುಗೆಯನ್ನು ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಅಧಿಕಾರ ಗೆದ್ದುಕೊಂಡಂತಾಗಿದೆ.

1ನೇ ವಾರ್ಡಿನ ಒಟ್ಟು ಐದು ಸ್ಥಾನಗಳಲ್ಲಿ ಗುರುರಾಜ, ರೇಖಾ ಖಾರ್ವಿ ಸರೋಜಕೃಷ್ಣ ಪೂಜಾರಿ, ನಾಗರಾಜ ಖಾರ್ವಿ, ನಾಗರತ್ನ ಶೇರುಗಾರ್ ಗೆಲುವು ಸಾಧಿಸಿದ್ದಾರೆ. 2ನೇ ವಾರ್ಡಿನಲ್ಲಿ ತಬ್ರರೈಸ್, ಶರೀನಾ, ಅಬೂಬಕ್ಕರ್ ನಾಕುದಾ ಹಾಗೂ ರಜಬ್ ಗೆಲುವು ಸಾಧಿಸಿದ್ದಾರೆ. 3ನೇ ವಾರ್ಡಿನಲ್ಲಿ ದೀಪಾ, ಗೋಪಾಲ್ ಖಾರ್ವಿ, ಮಮತಾ ಎಸ್ ಗಾಣಿಗ, ಶ್ಯಾಮಲ ಶೆಡ್ತಿ ಗೆಲುವು ಸಾಧಿಸಿದರೆ 4ನೇ ವಾರ್ಡಿನಲ್ಲಿ ಮಹೇಶ್, ಅಮ್ಮು ಮೊಗೇರ್ತಿ, ಶೋಭ ಕೃಷ್ಣ ಬಿಲ್ಲವ, ದೇವೇಂದ್ರ ಖಾರ್ವಿ ಗೆಲುವು ಸಾಧಿಸಿದ್ದಾರೆ.

5ನೇ ವಾರ್ಡಿನಲ್ಲಿ ಲಕ್ಷ್ಮಿ ಪೂಜಾರಿ, ಜನ್ನಿ ಖಾರ್ವಿ, ಗಣೇಶ್ ಪೂಜಾರಿ, ಜಯೇಂದ್ರ ಖಾರ್ವಿ ಗೆದ್ದು ಬೀಗಿದರೆ, 6ನೇ ವಾರ್ಡಿನಲ್ಲಿ ಮಂಜುಳಾ ದೇವಾಡಿಗ, ಮ್ಯಾಕ್ಸಿಮ್ ಆಲ್ಬರ್ಟ್, ಫೆರ್ನಾಂಡಿಸ್, ಮೊಮಿನ್ ಸಮೀರ್ ಅಹ್ಮದ್ ಗೆಲುವು ಸಾಧಿಸಿದ್ದಾರೆ. 7ನೇ ವಾರ್ಡಿನಲ್ಲಿ ಸುರೇಖಾ ಕಾನೋಜಿ, ಶ್ರೀನಾಥ್ ಖಾರ್ವಿ, ರಿಯಾಜ್ ಅಹ್ಮದ್ ಹಾಗೂ 8ನೇ ವಾರ್ಡಿನಲ್ಲಿ ಚಂದ್ರ ಖಾರ್ವಿ, ಅಕ್ಕಮ್ಮ ಯು ಕುಮಾರ್, ಅಶ್ವಿನಿ ಖಾರ್ವಿ, ರಾಜೇಂದ್ರ ಗೆಲುವು ಸಾಧಿಸಿದ್ದಾರೆ.

Click Here

LEAVE A REPLY

Please enter your comment!
Please enter your name here