ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮೈ ಮತ್ತು ಮನಸ್ಸಿನ ಸಾಮರ್ಥ್ಯವನ್ನು ಬೆಳೆಸುವ ಅತಿ ದೊಡ್ಡ ವೇದಿಕೆ ಕ್ರೀಡೆ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್, ಕೋಟೇಶ್ವರ ಇಲ್ಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಗೌರವ ರಕ್ಷೆಯನ್ನು ಸ್ವೀಕರಿಸಿ ಮಾತನಾಡಿದ ಕುಂದಾಪುರ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಧರ್ಮೇಂದ್ರ ಕುಮಾರ್ ಅಭಿಪ್ರಾಯ ಪಟ್ಟರು.
ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ ಶಾಂತಿದೂತ ಪಾರಿವಾಳವನ್ನು ಹಾರಿ ಬಿಡುವುದರ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು.
ಕ್ರೀಡಾಧ್ವಜವನ್ನು ಕೋಟೇಶ್ವರ ಲಯನ್ಸ್ ಕ್ಲಬ್‌ನ ಅಧ್ಯಕ್ಷ ವಿಶ್ವನಾಥ್ ಅರಳಿಸಿದರು.
ಇದೇ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಎಚ್.ಗೋಪಾಲ್ ಶೆಟ್ಟಿ ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು .
ಪ್ರಾಂಶುಪಾಲರಾದ ಪ್ರಕಾಶ್ ಶೆಟ್ಟಿ ಅತಿಥಿ ಗಣ್ಯರನ್ನು ಸ್ವಾಗತಿಸಿ, ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ವಂದಿಸಿದರು. ಶಿಕ್ಷಕಿ ದಿವ್ಯಪ್ರಭಾ ಕಾರ್ಯಕ್ರಮವನ್ನು ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಹೊಳ್ಳ ಮತ್ತು ಉದಯ ಮಡಿವಾಳ ಎಂ ಕ್ರೀಡಾಕೂಟವನ್ನು ಸಂಘಟಿಸಿದರು.