ಅಂಕೋಲಾ :ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ

0
140

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಪರಿಸರ ಪ್ರೇಮಿ,ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು.

Click Here

Click Here

ಅರಣ್ಯ ಇಲಾಖೆಯ ಸಸ್ಯ ನರ್ಸರಿಯಲ್ಲಿ ಚಿಕ್ಕ ವಯಸ್ಸಿನಲ್ಲೇ ಕೆಲಸ ಮಾಡಲು ಪ್ರಾರಂಭಿಸಿದ್ದ ತುಳಸಿಗೌಡ, ಬಾಲ್ಯದಲ್ಲಿಯೇ ಆಗಾಗ್ಗೆ ನರ್ಸರಿಗಳಿಗೆ ಭೇಟಿ ನೀಡಿ, ಸಸಿಗಳ ಬೆಳವಣಿಗೆ ಕುರಿತು ಆಳವಾದ ಜ್ಞಾನ ಬೆಳೆಸಿಕೊಂಡಿದ್ದರು. ಅಂಕೋಲಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಮರಗಳನ್ನು ನೆಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ. ಅವುಗಳಲ್ಲಿ ಬಹುತೇಕ ಸಸಿಗಳು ಕೆಲವೇ ವರ್ಷಗಳಲ್ಲಿ ಎತ್ತರಕ್ಕೆ ಬೆಳೆದಿದ್ದವು. ಅವರು ಪದ್ಮಶ್ರೀ ಮತ್ತು ಇಂದಿರಾ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಸಸ್ಯಗಳ ವಿಶ್ವಕೋಶ ಎಂದೇ ಕರೆಯಲಾಗುತ್ತಿದ್ದ ತುಳಸಿ ಗೌಡ, ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಸಮುದಾಯಕ್ಕೆ ಸೇರಿದವರು. ಅವರು ತಮ್ಮ ಮೂವರು ಮಕ್ಕಳು ಮತ್ತು ಹಲವಾರು ಹಿತೈಷಿಗಳನ್ನು ಅಗಲಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯು ಸಸಿಗಳನ್ನು ಪೋಷಿಸುವಲ್ಲಿ ಅವರ ಅಸಾಧಾರಣ ಪ್ರತಿಭೆಯನ್ನು ಗುರುತಿಸಿ, ಸಿಬ್ಬಂದಿಯಾಗಿ ವಿಶೇಷ ಸ್ಥಾನಮಾನ ನೀಡಿತ್ತು. ನಿವೃತ್ತಿಯ ನಂತರವೂ ಅವರು ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿತು.

ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿ ಇಡೀ ದೇಶದ ಗಮನ ಸೆಳೆದಿದ್ದರು. ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. 2020ರಲ್ಲಿ ಅಂದಿನ ರಾಷ್ಟ್ರಪತಿ ರಮಾನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು.

Click Here

LEAVE A REPLY

Please enter your comment!
Please enter your name here