ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಪಂಚವರ್ಣ ಮಹಿಳಾ ಮಂಡಲದ ಅರಿವು ನೆರವು 12ನೇ ಮಾಲಿಕೆ

0
117

ಕುಂದಾಪುರ ಮಿರರ್ ಸುದ್ದಿ…

ಕೋಟ: ಇಲ್ಲಿನ ಕೋಟದ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಅರಿವು ನಿಮಗಿರಲಿ ನೆರವು 12ನೇ ಮಾಲಿಕೆ ಕೋಟದ ವಿವೇಕ ಬಾಲಕೀಯ ಪ್ರೌಢ ಶಾಲೆ ಇಲ್ಲಿ ಡಿ.24ರ ಅಪರಾಹ್ನ 3.ಗ ನಡೆಯಲಿದೆ.

Click Here

ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲದ ಪ್ರಸಿದ್ಧ ವೈದ್ಯೆ ಡಾ. ವಾಣಿಶ್ರೀ ಭಾಗವಹಿಸಲಿದ್ದು ಕಾರ್ಯಕ್ರಮವನ್ನು ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಉದ್ಘಾಟಿಸಲಿದ್ದಾರೆ.

ಮುಖ್ಯ ಅಭ್ಯಾಗತರಾಗಿ ಕೋಟ ವಿವೇಕ ಬಾಲಕೀಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಗದೀಶ್ ಹೊಳ್ಳ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here