ಕುಂದಾಪುರ: ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಕೆ. ಜಯಪ್ರಕಾಶ ಹೆಗ್ಡೆ, ಐವನ್ ಡಿಸೋಜಾ ಭೇಟಿ

0
194

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಡಿ.24ರಂದು ಯೋಧರು ಪ್ರಯಾಣಿಸುತ್ತಿದ್ದ ವಾಹನ ರಸ್ತೆಯಿಂದ ಕಣಿವೆಗೆ ಉರುಳಿದ ಘಟನೆಯಲ್ಲಿ ಮೃತಪಟ್ಟ ಯೋಧ ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ (33) ನಿವಾಸಕ್ಕೆ ಶನಿವಾರ ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಭೇಟಿನಿಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

Click Here

ಈ ಸಂದರ್ಭದಲ್ಲಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಮೃತ ಯೋಧ ಅನೂಪ್ ಪೂಜಾರಿಯವರ ಕುಟುಂಬ ಬಡತನದಲ್ಲಿದ್ದು ಸೂಕ್ತ ಪರಿಹಾರ ನೀಡಲು ಸರಕಾರದ ಗಮನಕ್ಕೆ ತರಲಾಗುತ್ತಿದೆ. ಪತ್ನಿ ಪದವಿಧರೆಯಾಗಿದ್ದು ಅವರಿಗೆ ಸರಕಾರಿ ನೌಕರಿ ಕೊಡಿಸುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಲಾಗುತ್ತದೆ. ಜಿಲ್ಲೆಯ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು ತುರ್ತು ಗುತ್ತಿಗೆ ಅಧಾರದ ನೌಕರಿ ಕೊಡಿಸಿ ಮುಂದಿನ ದಿನದಲ್ಲಿ ಖಾಯಂ ಹುದ್ದೆ ನೇಮಕಾತಿ ಮಾಡಿಸುವ ಬಗ್ಗೆ ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಮೃತ ಯೋಧನ ಕುಟುಂಬ ಆರ್ಥಿಕವಾಗಿ ಹಿಂದುಳಿದಿದೆ. ಮೃತರ ಪುಟ್ಟ ಮಗುವಿನ ಭವಿಷ್ಯದ ಹಿತದೃಷ್ಟಿಯಿಂದ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗುತ್ತದೆ. ಈ ಕುಟುಂಬದ ಜೊತೆ ಸರಕಾರ ನಿಲ್ಲುತ್ತದೆ ಎಂದು ತಿಳಿಸಿದರು.

ಸಾಮಾಜಿಕ ಕಾರ್ಯಕರ್ತ ಅಶೋಕ್ ಪೂಜಾರಿ ಬೀಜಾಡಿ, ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ. ಹೆರಿಯಣ್ಣ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here