ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಎಸ್. ಡಿ. ಎಂ. ಸಿ. ಸಮನ್ವಯ ಕೇಂದ್ರ ವೇದಿಕೆ ( ರಿ.)ಯ ರಾಜ್ಯ ನಿರ್ದೇಶಕರು ಹಾಗೂ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರು ಆಗಿರುವ ಅಬ್ದುಲ್ ಸಲಾಂ ಚಿತ್ತೂರು ಅವರಿಗೆ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕು ಮಿತ್ತೂರಿನ
ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ವತಿಯಿಂದ ಜ.7ರಂದು 35 ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಸರಕಾರಿ ಶಾಲೆಗಳ ಉಳಿವಿಗಾಗಿ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.