ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಕುಂಭಾಶಿಯ ಶ್ರೀಧರ್ ಆಚಾರ್ ಮತ್ತು ಹೇಮಲತಾ ಅವರ ಪುತ್ರನಾದ ಸಚಿನ್ ಆಚಾರ್, ದ್ವಿತೀಯ ಬಿ.ಸಿ.ಎ. (ಬಿ) ಇವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ| ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿ ಇವರು ಅಭಿನಂದಿಸಿದ್ದಾರೆ.